ಜನ್ಮದಿನ ಸಂಭ್ರಮದಿಂದ ಪ್ರಧಾನಿ ನಿವಾಸದ ಬಳಿ ಧರಣಿ ವರೆಗೆ ; ಕಾಂಗ್ರೆಸ್‌ನ ಅನಿರೀಕ್ಷಿತ ಪ್ರತಿಭಟನೆ ನಡೆದದ್ದು ಹೇಗೆ…?

ನವದೆಹಲಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಅಂಗವಾಗಿ ಮಂಗಳವಾರ ನಡೆದ ಸಭೆ, ಇತ್ತೀಚಿನ ವರ್ಷಗಳಲ್ಲಿ ಕಾಂಗ್ರೆಸ್ ನಡೆಸಿದ ಅತ್ಯಂತ ಅನಿರೀಕ್ಷಿತ ರಾಜಕೀಯ ಪ್ರತಿಭಟನೆಗಳಲ್ಲಿ ಒಂದಾಗಿ ಪರಿಣಮಿಸಿತು. ಜುಲೈ 21ರಂದು 84ನೇ ವರ್ಷಕ್ಕೆ ಕಾಲಿಟ್ಟಿದ್ದ ಖರ್ಗೆ ಅವರ ಜನ್ಮದಿನದ ಹಿನ್ನೆಲೆಯಲ್ಲಿ, ಮಂಗಳವಾರ ಮಧ್ಯಾಹ್ನ ದೆಹಲಿಯ 10, ರಾಜಾಜಿ ಮಾರ್ಗದಲ್ಲಿರುವ ಅವರ ನಿವಾಸಕ್ಕೆ ಹಿರಿಯ … Continued

ಮೈಸೂರು : ಪತ್ನಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಮಂಗಳವಾರ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ ಎಂದು ವರದಿಯಾಗಿದೆ. 49 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಹತ್ಯೆಗೈದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಹರೀಶ (43), ಪತ್ನಿ ನಿಶಿತ್ (36), ಹಾಗೂ ಪತ್ರಿಯರಾದ … Continued

ವಿಡಿಯೊ | ಪ್ರಧಾನಿ ಮೋದಿ ನಿವಾಸದ ಬಳಿ ಕಾಂಗ್ರೆಸ್ ಪ್ರತಿಭಟನೆ : ರಾಹುಲ್, ಪ್ರಿಯಾಂಕಾ ಗಾಂಧಿ ವಶಕ್ಕೆ, ಬಸ್‌ನಲ್ಲಿ ಕರೆದೊಯ್ದ ಪೊಲೀಸರು

ನವದೆಹಲಿ: ಅತ್ಯಂತ ನಾಟಕೀಯ ಘಟನೆಗಳಿಗೆ ದೇಶದ ರಾಜಧಾನಿ ಮಂಗಳವಾರ ಸಾಕ್ಷಿಯಾಯಿತು. ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲಿನ “ದೌರ್ಜನ್ಯ”ವನ್ನು ಖಂಡಿಸಿ, ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸಕ್ಕೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ವೇಳೆ ಪೊಲೀಸರು ರಾಹುಲ್ ಗಾಂಧಿ ಸೇರಿದಂತೆ ಹಲವು … Continued

ದಾಂಪತ್ಯ ಜಗಳದಲ್ಲಿ ಉದ್ಯೋಗದಾತರಿಗೆ ಹೆಂಡತಿ ದೂರು ನೀಡುವುದು ಏಕೆ..? ಈ ಪ್ರವೃತ್ತಿಗೆ ಸುಪ್ರೀಂ ಕೋರ್ಟ್ ಕಳವಳ

ನವದೆಹಲಿ: ದಾಂಪತ್ಯ ಕಲಹದ ವೇಳೆ ಪತಿಯ ಕಂಪನಿ ಅಥವಾ ಉದ್ಯೋಗದಾತರಿಗೆ (ಉದ್ಯೋಗ ಕೊಡುವವರಿಗೆ) ದೂರು ನೀಡುವ ಹೆಂಡತಿಯರ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಂತಹ ದೂರುಗಳು ಗಂಡನ ಕೆಲಸವನ್ನೇ ಕಳೆದುಕೊಳ್ಳುವಂತೆ ಮಾಡಿ, ಅಂತಿಮವಾಗಿ ಪತ್ನಿಯ ಜೀವನಾಂಶದ ಹಕ್ಕುಗಳ (Maintenance) ಮೇಲೆ ಪರಿಣಾಮ ಬೀರಬಹುದು ಎಂದು ನ್ಯಾಯಾಲಯ ಗಮನಿಸಿದೆ. ನ್ಯಾಯಮೂರ್ತಿ ಬಿ.ವಿ. ನಾಗರತ್ನ … Continued

ವಾಟ್ಸಾಪ್​ನಲ್ಲಿ ಮದುವೆ ಆಮಂತ್ರಣ ಕಾರ್ಡ್‌ ಬಂದ್ರೆ ಕ್ಲಿಕ್ ಮಾಡುವ ಮುನ್ನ ಎಚ್ಚರ ; ಕ್ಲಿಕ್ ಮಾಡಿ 10 ಲಕ್ಷ ರೂ. ಕಳೆದುಕೊಂಡ ಅಧಿಕಾರಿ !

ಬೆಂಗಳೂರು : ನಗದಲ್ಲಿ ಆಘಾತಕಾರಿ ಸೈಬರ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವಾಟ್ಸಾಪ್‌ನಲ್ಲಿ ಬಂದ ಮದುವೆ ಆಮಂತ್ರಣ ಪತ್ರಿಕೆಯ ರೂಪದಲ್ಲಿದ್ದ ಮಾಲ್‌ವೇರ್ (APK) ಫೈಲ್ ಡೌನ್‌ಲೋಡ್ ಮಾಡಿದ ಉಪ ವಲಯ ಅರಣ್ಯಾಧಿಕಾರಿಯೊಬ್ಬರು ಬರೋಬ್ಬರಿ 10 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಅಧಿಕಾರಿಗೆ ವಾಟ್ಸಾಪ್‌ನಲ್ಲಿ ಬಂದಿದ್ದ ಮದುವೆ ಆಹ್ವಾನ ಪತ್ರಿಕೆಯು ನಿಜವಾದದ್ದೇ ಎಂದು ನಂಬಿ, ಅವರು ಆ ಫೈಲ್ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆ

ಬೆಂಗಳೂರು: ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಕೆಲವೆಡೆ ಗುಡುಗು ಸಹಿತ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ … Continued