ಮೈಸೂರು : ಪತ್ನಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ಪತಿ

ಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಮಂಗಳವಾರ ಒಂದೇ ಕುಟುಂಬದ ನಾಲ್ವರು ಸಾವಿಗೀಡಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ ಎಂದು ವರದಿಯಾಗಿದೆ. 49 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಹತ್ಯೆಗೈದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಮೃತರನ್ನು ಹರೀಶ (43), ಪತ್ನಿ ನಿಶಿತ್ (36), ಹಾಗೂ ಪತ್ರಿಯರಾದ 12 ವರ್ಷದ ನಿಕ್ಷಾ ಮತ್ತು 8 ವರ್ಷದ ರಕ್ಷಾ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ನ್ಯೂ ಮಾರುತಿ ಲೇಔಟ್‌ನಲ್ಲಿ ವಾಸವಿದ್ದ ಹರೀಶ, ತಮ್ಮ ಪತ್ನಿ ಮತ್ತು ಮಕ್ಕಳ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟುವಂತೆ ಮಾಡಿದ್ದು, ಇದರಿಂದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಗೆ ಮುನ್ನ ಹರೀಶ್ ಡೆತ್‌ನೋಟ್ ಬರೆದಿಟ್ಟಿದ್ದು, ಅವರು ಮನೆಯ ಮೇಲಂತಸ್ತಿನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಲ್ಲದೆ, ಲಾಕರ್‌ನಲ್ಲಿ ಇರಿಸಿದ್ದ ಆಸ್ತಿ ದಾಖಲೆಗಳು ಸೇರಿದಂತೆ ಪ್ರಮುಖ ದಾಖಲೆಗಳ ಬಗ್ಗೆ ಮಾಹಿತಿ ನೀಡಿದ್ದು, ಲಾಕರ್ ಕೀಲಿಗಳು ಎಲ್ಲಿ ಇವೆ ಎಂಬುದನ್ನೂ ಬರೆದು, ಆ ದಾಖಲೆಗಳನ್ನು ಪತ್ರದಲ್ಲಿ ಉಲ್ಲೇಖಿಸಿರುವ ವ್ಯಕ್ತಿಗೆ ಹಸ್ತಾಂತರಿಸುವಂತೆ ಪೊಲೀಸರಿಗೆ ಮನವಿ ಮಾಡಿದ್ದಾನೆ.
ಹರೀಶ ಅವರ ತಾಯಿ ಸಹ ಕುಟುಂಬದೊಂದಿಗೆ ವಾಸವಾಗಿದ್ದರು. ಆದರೆ, ಘಟನೆ ನಡೆಯುವ ಮೂರು ದಿನಗಳ ಮುಂಚೆಯೇ ಅವರನ್ನು ಸಂಬಂಧಿಕರ ಮನೆಗೆ ಕಳುಹಿಸಲಾಗಿತ್ತು

ಪ್ರಮುಖ ಸುದ್ದಿ :-   ಆದಿತ್ಯ ಎಲ್‌1, ಪ್ರೋಬಾ-3 ಉಪಗ್ರಹಗಳ ನೆರವಿನಿಂದ ಸೌರ ಸ್ಫೋಟಗಳ ರಹಸ್ಯ ಬಯಲು ಮಾಡಿದ ವಿಜ್ಞಾನಿಗಳು

. ಈ ಕೃತ್ಯವು ಸೋಮವಾರ ರಾತ್ರಿ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ಮನೆಯ ಬಾಗಿಲು ಬಹಳ ಸಮಯದಿಂದ ತೆರೆಯದಿರುವುದನ್ನು ಗಮನಿಸಿದ ಅಕ್ಕಪಕ್ಕದವರು ಕಿಟಕಿಯಿಂದ ಒಳಗೆ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಹುಣಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. “ಹತ್ಯೆ ಮತ್ತು ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಎಲ್ಲ ಆಯಾಮಗಳಿಂದ ತನಿಖೆ ಮುಂದುವರಿದಿದೆ,” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement