ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪುಷ್ಯ ಮಳೆ ಚುರುಕು ಪಡೆಯುತ್ತಿದ್ದು, ಜುಲೈ 22 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿ ಸಮೇತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬುಧವಾರ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಜತೆಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ತಿಳಿಸಿದೆ.
ಉತ್ತರ ಒಳನಾಡಿನ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ಹವಾಮಾನ ಕೇಂದ್ರವು ಹವಾಮಾನ ಮುನ್ಸೂಚನೆಯನ್ನು ಬಿಡುಗಡೆ ಮಾಡಿದೆ. ಉತ್ತರ ಒಳನಾಡಿನಲ್ಲಿ ಜುಲೈ 22 ಕ್ಕೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜೊತೆಗೆ ಬಲವಾದ ಬಿರುಗಾಳಿ ಬೀಸುವ ಮುನ್ನೆಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಈ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.

ಪ್ರಮುಖ ಸುದ್ದಿ :-   ವಾಟ್ಸಾಪ್​ನಲ್ಲಿ ಮದುವೆ ಆಮಂತ್ರಣ ಕಾರ್ಡ್‌ ಬಂದ್ರೆ ಕ್ಲಿಕ್ ಮಾಡುವ ಮುನ್ನ ಎಚ್ಚರ ; ಕ್ಲಿಕ್ ಮಾಡಿ 10 ಲಕ್ಷ ರೂ. ಕಳೆದುಕೊಂಡ ಅಧಿಕಾರಿ !

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement