ಭಾರಿ ಮಳೆ ಮುನ್ಸೂಚನೆ; ಉತ್ತರ ಕನ್ನಡ ಜಿಲ್ಲೆಯ ಈ ತಾಲೂಕಿನ ಶಾಲೆಗಳಿಗೆ ಇಂದು(ಜುಲೈ 24) ರಜೆ ಘೋಷಣೆ

ಕಾರವಾರ ; ಹವಾಮಾನ ಇಲಾಖೆಯು ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ ಹಾಗೂ ಜೊಯಿಡಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 24(ಶುಕ್ರವಾರ)ರಂದು ರಜೆ ಘೋಷಿಸಲಾಗಿದೆ.
ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಈ ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶಿರಸಿ, ಸಿದ್ದಾಪುರ ಹಾಗೂ ಜೊಯಿಡಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 24(ಶುಕ್ರವಾರ)ರಂದು ರಜೆ ಘೋಷಿಸಲಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನಂದಿನಿ ತುಪ್ಪ, ಬೆಣ್ಣೆ ಬೆಲೆ ಹೆಚ್ಚಳ ; ಜುಲೈ 24ರಿಂದ ಜಾರಿ

ನಿಮ್ಮ ಕಾಮೆಂಟ್ ಬರೆಯಿರಿ

advertisement