ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಜುಲೈ 23 ದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಯಲ್ಲೋ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ ರಜೆ ಘೋಷಿಸಿ ಎಚ್.ವಿ. ಆದೇಶ ಹೊರಡಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ