ಜಂತರ್ ಮಂತರ್ ಪ್ರತಿಭಟನೆ ವೇಳೆ ಹಿಂಸಾಚಾರ: 2,873 ಅಪರಾಧ ಹಿನ್ನೆಲೆಯವರ ಗುರುತು ಪತ್ತೆ; 989 ಮಂದಿ ವಿರುದ್ಧ ಗಂಭೀರ ಪ್ರಕರಣಗಳು

ನವದೆಹಲಿ: ಕಳೆದ ವಾರ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನೂರಾರು ಗಿಗಾಬೈಟ್‌ಗಳಷ್ಟು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವ್ಯಂಗ್ಯಾತ್ಮಕ ರಾಜಕೀಯ ಸಂಘಟನೆಯಾದ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ … Continued

ದ್ವೇಷ ಭಾಷಣದ ಆರೋಪ ; ಸಿ.ಟಿ.ರವಿಗೆ ಮಧ್ಯಂತರ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ಮಾತನಾಡುವಾಗ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವಿರುದ್ಧ ದಾಖಲಾಗಿರುವ ಪ್ರಕರಣ ಸಂಬಂಧ ಬಲವಂತದ ಕ್ರಮ ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಮಧ್ಯಂತರ ಆದೇಶ ಮಾಡಿದೆ. ಚಿಕ್ಕಮಗಳೂರು ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರು ಹಾಗೂ ಎಫ್‌ಐಆರ್ ರದ್ದು … Continued

ಸುಳ್ಳು ಆದಾಯ ಪ್ರಮಾಣಪತ್ರ ಪ್ರಕರಣ : ಸುಮಾ ಸಾಹುಕಾರಗೆ ಹೈಕೋರ್ಟ್ ತರಾಟೆ

ಬೆಂಗಳೂರು : ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅಕ್ರಮವಾಗಿ ನೇಮಕವಾಗಲು ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ ಆರೋಪ ಸಂಬಂಧ ತಮ್ಮ ವಿರುದ್ಧ ದಾಖಲಾದ ಎಫ್ಐಆರ್ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಶಿವಶಂಕರಪ್ಪ ಸಾಹುಕಾರ ಅವರ ಪುತ್ರಿಯ ವಿರುದ್ಧ ಕರ್ನಾಟಕ ಹೈಕೋರ್ಟ್ ಸೋಮವಾರ ಕಿಡಿಕಾರಿತು. ಹಿಂದುಳಿದ ವರ್ಗಗಳ 3ಬಿ ಕೆಟಗರಿ ಕೋಟಾದಡಿ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ … Continued

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಹೈಡ್ರಾಮಾ : ಎಐಸಿಸಿ ವೀಕ್ಷಕರ ಮುಂದೆಯೇ ಕೈಕೈ ಮಿಲಾಯಿಸಿದ ಕಾರ್ಯಕರ್ತರು

ಬೆಳಗಾವಿ: ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಸಂಬಂಧ ನಡೆದ ಸಭೆಯಲ್ಲಿ ಕಾರ್ಕರ್ತರ ನಡುವೆ ಗದ್ದಲ ನಡೆದಿದ್ದು, ಪರಸ್ಪರ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ ಘಟನೆ ಬೆಳಗಅವಿಯಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಮಧ್ಯಾಹ್ನ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಸಂಬಂಧ ನಡೆದ ಸಭೆ ನಡೆದಿತ್ತು. ಈ … Continued

ಪರೀಕ್ಷಾ ಅಕ್ರಮ ತಡೆಗೆ ಲೋಕಸಭೆಯಲ್ಲಿ ತಿದ್ದುಪಡಿ ಮಸೂದೆ ಮಂಡನೆ; 2024ರ ಕಾಯ್ದೆಗಿಂತ ಇದರಲ್ಲಿ ಏನೆಲ್ಲ ಬದಲಾವಣೆ ?

ನವದೆಹಲಿ: ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಹಾಗೂ ಇದರ ಮೇಲೆ ಸಾರ್ವಜನಿಕ ವಿಶ್ವಾಸವನ್ನು ಮರುಸ್ಥಾಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈಗಾಗಲೇ ಜಾರಿಯಲ್ಲಿರುವ ಕಾನೂನುಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ʼಸಾರ್ವಜನಿಕ ಪರೀಕ್ಷೆಗಳು (ಅಕ್ರಮ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ)ಯನ್ನು ಸೋಮವಾರ ಲೋಕಸಭೆಯಲ್ಲಿ ಕೇಂದ್ರ ಸಚಿವ ಜಿತೇಂದ್ರ … Continued

ಮೈ ಜುಂ ಎನ್ನುವ ವಿಡಿಯೊ : ತನ್ನ ಮೇಲೆ ದಾಳಿ ಮಾಡಿದ ಕಾಳಿಂಗ ಸರ್ಪವನ್ನೇ ಹೆದರಿಸಿದ ಬೆಕ್ಕು

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಅಪರೂಪದ ಹಾಗೂ ಅಸಾಮಾನ್ಯ ವಿಡಿಯೊವೊಂದು ಲಕ್ಷಾಂತರ ಮಂದಿಯ ಗಮನ ಸೆಳೆದಿದೆ. ವಿಷಕಾರಿ ಕಾಳಿಂಗ ಸರ್ಪ ಮತ್ತು ಬೆಕ್ಕಿನ ನಡುವಿನ ಉಸಿರು ಬಿಗಿಹಿಡಿಯುವ ಕಾದಾಟ ಅಥವಾ ಮುಖಾಮುಖಿ ನೋಡುಗರಲ್ಲಿ ಅಚ್ಚರಿ, ಕುತೂಹಲ ಹಾಗೂ ಆತಂಕವನ್ನು ಮೂಡಿಸಿದೆ. ವಿಡಿಯೊದಲ್ಲಿ ಕಾಳಿಂಗ ಸರ್ಪವು ಪದೇಪದೇ ಬೆಕ್ಕಿನ ಮೇಲೆ ದಾಳಿಗೆ ಮುಂದಾದರೂ, ಬೆಕ್ಕು ತನ್ನ ಅದ್ಭುತ … Continued

ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಸಂಗ್ರೂರ್ : ಭಾರತೀಯ ಜನತಾ ಪಕ್ಷ (ಬಿಜೆಪಿ) ಕಚೇರಿಗೆ ಸೋಮವಾರ ಮುಂಜಾನೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ಪಂಜಾಬ್‌ನ ಸಂಗ್ರೂರಿನಲ್ಲಿ ನಡೆದಿದೆ. ಈ ದಾಳಿಯಿಂದ ಕಚೇರಿಯ ಹೊರಗೋಡೆಯಲ್ಲಿ ಸುಟ್ಟ ಗುರುತುಗಳು ಕಂಡುಬಂದಿದ್ದು, ಅದೃಷ್ಟವಶಾತ್ ಪ್ರಾಣಾಪಾಯ ಅಥವಾ ಯಾರಿಗೂ ಗಾಯಗಳಾಗಿಲ್ಲ. ಪ್ರಕರಣ ಸಂಬಂಧ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಸೋಮವಾರ ಮುಂಜಾನೆ … Continued

ವಿಡಿಯೊ | ವಿದ್ಯಾರ್ಥಿಗಳ ಮೇಲೆ ಎಕೆ-47ನಿಂದ ಗುಂಡು ಹಾರಿಸಿದ ಆರೋಪ: ಪೊಲೀಸ್ ಸಿಬ್ಬಂದಿ ಅಮಾನತು

ಪಾಟ್ನಾ : ಜುಲೈ 25ರಂದು ನಡೆದ ‘ಬಿಹಾರ ಬಂದ್‌ʼ ವೇಳೆ ಸಿವಾನ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ವೈರಲ್ ಆದ ವಿಡಿಯೊವನ್ನು ಗಂಭೀರವಾಗಿ ಪರಿಗಣಿಸಿದ ಬಿಹಾರ ಪೊಲೀಸ್ ಇಲಾಖೆಯು ಸಂಬಂಧಿತ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ. ರಾಜ್ಯವ್ಯಾಪಿ ನಡೆದ ಬಿಹಾರ ಬಂದ್ ವೇಳೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಹಲವು … Continued

ವಿಡಿಯೊ | ಕಾರ್ಗಿಲ್ ಯುದ್ಧದಲ್ಲಿ ತಮ್ಮ ಸೈನಿಕರ ಶವಗಳನ್ನೂ ಸ್ವೀಕರಿಸದ ಪಾಕ್ ಸೇನೆ, ಭಾರತ ಸಮಾಧಿ ಮಾಡಿತ್ತು ; ತಮ್ಮ ಸೇನೆಗೇ ಪಾಕ್‌ ನಾಯಕನಿಂದ ಮಂಗಳಾರತಿ

 ಕಾರ್ಗಿಲ್ ಯುದ್ಧದ ವರ್ಷಾಚರಣೆ ಕೆಲವೇ ದಿನಗಳು ಬಾಕಿ ಇರುವಾಗ, ಪಾಕಿಸ್ತಾನದ ರಾಜಕಾರಣಿ ಹಾಗೂ ರಾಷ್ಟ್ರೀಯ ಅಸೆಂಬ್ಲಿ (ಎಂಎನ್‌ಎ) ಸದಸ್ಯ, ಜಮಿಯತ್ ಉಲೇಮಾ-ಎ-ಇಸ್ಲಾಂ (ಜೆ.ಯು.ಐ.) ಅಧ್ಯಕ್ಷ ಮೌಲಾನಾ ಫಜ್ಲುರ್ ರೆಹಮಾನ್ ಅವರು ಪಾಕಿಸ್ತಾನ ಸೇನೆ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವುದು ಈಗ ಭಾರಿ ಚರ್ಚಿತ ವಿಷಯವಗಿ ಪರಿಣಮಿಸಿದೆ.   1999ರ ಕಾರ್ಗಿಲ್ ಯುದ್ಧದಲ್ಲಿ ಮೃತಪಟ್ಟ ಪಾಕಿಸ್ತಾನಿ ಸೈನಿಕರ … Continued

ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಂದನ ನಿಲೇಕಣಿ ಈಗ ಮೋದಿ ಸರ್ಕಾರದ ಆಯ್ಕೆ ; ಎನ್‌ಟಿಎ ಸುಧಾರಣಾ ಟಾಸ್ಕ್‌ಫೋರ್ಸ್‌ ನೇತೃತ್ವದ ಹೊಣೆ

ನವದೆಹಲಿ: ರಾಜಕೀಯ ಹಿನ್ನೆಲೆಗಿಂತ ತಾಂತ್ರಿಕ ಪರಿಣತಿ ಮತ್ತು ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿರ್ಧಾರವಾಗಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ ನಿಲೇಕಣಿ ಅವರನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಸುಧಾರಣೆಗಾಗಿ ರಚಿಸಲಾದ ಉನ್ನತ ಮಟ್ಟದ ಕಾರ್ಯಪಡೆಯ (ಹೈ-ಪವರ್ಡ್ ಟಾಸ್ಕ್‌ಫೋರ್ಸ್) ಸದಸ್ಯರನ್ನಾಗಿ ನೇಮಕ ಮಾಡಿದ್ದು, ಅದರ ನೇತೃತ್ವ ವಹಿಸಲಾಗಿದೆ. ನಂದನ … Continued