ಯೋಗೀಶ ಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿಗೆ ಹೈಕೋರ್ಟ್ ಜಾಮೀನು, ಶಿಕ್ಷೆ ಅಮಾನತು

ಬೆಂಗಳೂರು : ಧಾರವಾಡದ ಬಿಜೆಪಿ‌ ಮುಖಂಡ ಯೊಗೀಶ ಗೌಡರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಶಾಸಕ ವಿನಯ ಕುಲಕರ್ಣಿ ಸೇರಿ 10 ಮಂದಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಮಧ್ಯಂತರ ಅರ್ಜಿಗಳನ್ನು ಮಾನ್ಯ ಮಾಡಿರುವ ಪೀಠವು ಜನಪ್ರತಿ‌ನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಶಿಕ್ಷೆ ರದ್ದುಕೋರಿ ಸಲ್ಲಿಸಲಾಗಿರುವ ಮೇಲ್ಮನವಿಗಳು ಇತ್ಯರ್ಥವಾಗುವವರೆಗೆ ವಿಚಾರಣಾ ನ್ಯಾಯಾಲಯದ ಆದೇಶವನ್ನು ಅಮಾನತಿನಲ್ಲಿರಿಸಲಾಗಿದ್ದು, ಮೇಲ್ಮನವಿದಾರರನ್ನು ಷರತ್ತುಗಳಿಗೆ ಒಳಪಟ್ಟಂತೆ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಆದೇಶಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ.

ಜೀವಾವಧಿ ಶಿಕ್ಷೆ ವಿಧಿಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಆದೇಶ ಅಮಾನತ್ತಿನಲ್ಲಿಟ್ಟು, ಜಾಮೀನು ನೀಡುವಂತೆ ಕಾಂಗ್ರೆಸ್ ಮುಖಂಡ ವಿನಯ ಕುಲಕರ್ಣಿ, ಚಂದ್ರಶೇಖರ ಇಂಡಿ ಮತ್ತಿತರರು ಸಲ್ಲಿಸಿದ್ದ ಮಧ್ಯಂತರ‌‌ ಅರ್ಜಿಗಳ ಕುರಿತ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿಗಳಾದ ಮೊಹಮ್ಮದ್ ನವಾಜ್ ಮತ್ತು ಜಿ ಬಸವರಾಜ ಅವರ ವಿಭಾಗೀಯ ಪೀಠ ಶುಕ್ರವಾರ ಪ್ರಕಟಿಸಿದೆ.

ಆರೋಪಿಗಳೆಲ್ಲರೂ ತಲಾ 5 ಲಕ್ಷ ರೂಪಾಯಿ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ಒದಗಿಸಬೇಕು, ದಂಡದ ಮೊತ್ತವನ್ನು ವಿಶೇಷ ನ್ಯಾಯಾಲಯದಲ್ಲಿ ಠೇವಣಿ ಇಡಬೇಕು. ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ದೇಶವನ್ನು ತೊರೆಯುವಂತಿಲ್ಲ. ಹೈಕೋರ್ಟ್ ಹಾಗೂ ವಿಶೇಷ ನ್ಯಾಯಾಲಯ ನಿರ್ದೇಶಿಸಿದಾಗ ನ್ಯಾಯಾಲಯದ ಮುಂದೆ ಖುದ್ದು ಹಾಜರಾಗಬೇಕು ಎಂಬ ಷರತ್ತುಗಳನ್ನು ಹೈಕೋರ್ಟ್ ವಿಧಿಸಿದೆ ಎಂದು ವರದಿ ಹೇಳಿದೆ.
7 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಅಂದಿನ ಪೊಲೀಸ್ ಇನ್‌ಸ್ಪೆಕ್ಟರ್ ಚನ್ನಕೇಶವ ಬಿ. ಟೆಂಗರಿಕರ್ (ಎ19) ಅವರ ಶಿಕ್ಷೆಯನ್ನೂ ಅಮಾನತಿನಲ್ಲಿಟ್ಟಿರುವ ಹೈಕೋರ್ಟ್, ಜಾಮೀನು ಮಂಜೂರು ಮಾಡಿದ್ದು, ಇತರ ಆರೋಪಿಗಳಿಗೆ ವಿಧಿಸಿರುವ ಷರತ್ತುಗಳನ್ನೇ ಅವರಿಗೂ ವಿಧಿಸಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಜೋರಾದ ಗಾಳಿಮಳೆ ಮುನ್ಸೂಚನೆ ; ಆರೆಂಜ್‌-ಯೆಲ್ಲೋ ಅಲರ್ಟ್‌ ಘೋಷಣೆ

5 / 5. 1

ಶೇರ್ ಮಾಡಿ :

  1. ಶ್ರೀಕಂಠ ಬಾಳಗಂಚಿ

    ಹೌದು ನಿಜ ನೂರು ಅಪರಾಧಿಗೆ ಶಿಕ್ಷೆಯಾಗದೇ ಹೊದರೂ ಒಬ್ಬ ನಿರಪರಾಧಿಗೆ ಶಿಕ್ಷೆ ಆಗಬಾರದು ಎಂಬ ನಿಯವಿದೆ ಹಾಗೆಂದ ಮಾತ್ರಕ್ಕೆ ಕೋಟ್ಯಾಂತರ ರೂಪಾಯಿ ಹಣ ವ್ಯಯಿಸಿ, ಹತ್ತಾರು ವರ್ಷಗಳ ಕಾಲ ತನಿಖೆ ನಡೆಸಿ ಕೆಳಮನೆಯ ನ್ಯಾಯಾಧೀಷರು ನೀಡಿದ ತೀರ್ಪನ್ನು ಈ ರೀತಿಯಾಗಿ ಮೇಲ್ಮನೆಯ ನ್ಯಾಯಾಲಯಗಳು ಅಮಾನತ್ತಿನಲ್ಲಿಟ್ಟರೆ, ಈ ದೇಶದ ಜನರಿಗೆ ನ್ಯಾಯಾಲಯದ ಮೇಲಿನ ನಂಬಿಕೆಗಳೇ ಕಳೆೆದು ಹೋಗುತ್ತದೆ.

    ಮೇಲ್ಮನೆಯ ತನಿಖೆ ನಡೆಯುವಾಗ ಆಪರಾಧಿಗಳಿಗೆ ಜಾಮೀನು ನೀಡಿದಲ್ಲಿ ಅವರುಗಳು ತಮ್ಮ ವಿರುದ್ಧದ ಸಾಕ್ಷಾಧಾರಗಳನ್ನು ನಾಶಪಡಿಸುವ ಸಾಧ್ಯತೆಯೂ ಸಹ ಇರುವುದನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿ, ಜೀವಾವಧಿ ಶಿಕ್ಷೆ ಅಥವಾ ಅದಕ್ಕಿಂತಲೂ ಹೆಚ್ಚಿನ ಶಿಕ್ಷೆಗೆ ಒಳ ಪಟ್ಟಿರುವವರಿಗೆ ಮೇಲ್ಮನವಿ ಸಲ್ಲಿಸಿದಾಗ ಜಾಮೀನು ನೀಡುವುದು ಸರಿ ಕಾಣದು ಅಲ್ವೇ?

    ಏನಂತೀರೀ?

ನಿಮ್ಮ ಕಾಮೆಂಟ್ ಬರೆಯಿರಿ

advertisement