ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಜೋರಾದ ಗಾಳಿಮಳೆ ಮುನ್ಸೂಚನೆ ; ಆರೆಂಜ್‌-ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ವಾಯುಭಾರ ಕುಸಿತದಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆ (Rain)ಯಾಗುತ್ತಿದೆ. ಮುಂದಿನ ಎರಡ್ಮೂರು ದಿನ ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆಗಸ್ಟ್ 1ರ ವರೆಗೆ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಜುಲೈ 31ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಅಲ್ಲದೆ, ಬೆಳಗಾವಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೂ ಅತಿ ಭಾರಿ ಮಳೆ ಮುನ್ಸೂಚನೆ ನೀಡಲಾಗಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಜುಲೈ 31ರಂದು  ಹಾಸನ, ಕೊಡಗು, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಆಗಸ್ಟ್ 1ರಂದು ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಉತ್ತರ ಕನ್ನಡ, ಉಡುಪಿ, ಹಾಸನ, ಕೊಡಗು, ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರಿಂದ ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಬೆಂಗಳೂರು | ಮಗಳ ತಿಂಗಳ ಸಂಬಳ, ಭಾವಿ ವರನ ಬಳಿ ₹40 ಲಕ್ಷ ಡಿಮ್ಯಾಂಡ್‌ : ಒಪ್ಪದ್ದಕ್ಕೆ ಮಗಳಿಗೆ ಚಾಕುವಿನಿಂದ ಇರಿದ ತಂದೆ !

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement