ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌-ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಮುಂದಿನ ಮೂರು ದಿನ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ಆಗಸ್ಟ್‌ ೧ರಂದು ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಬೀದರ, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಹಾಸನ, ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆಎಂದುತಿಳಿಸಲಾಗಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement