ಭಾರಿ ಮಳೆ ಮುನ್ಸೂಚನೆ : ಆಗಸ್ಟ್‌ 1ರಂದು ದಕ್ಷಿಣ ಕನ್ನಡ ಜಿಲ್ಲೆ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ- ಪಿಯು ಕಾಲೇಜುಗಳಿಗೆ ಶನಿವಾರ (ಆಗಸ್ಟ್ 1 ರಂದು) ರಜೆ ಘೋಷಣೆ ಮಾಡಲಾಗಿದೆ.
ಹವಾಮಾನ ಇಲಾಖೆಯು ಆಗಸ್ಟ್‌ 1ರಂದು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿಯಿಂದ ಹಿಡಿದು ದ್ವಿತೀಯ ಪಿಯು ಕಾಲೇಜಿನ ವರೆಗೆ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ದರ್ಶನ ಹೆಚ್.ವಿ ಆದೇಶಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ತಾಯಿ ಗದರಿದ ಕೋಪಕ್ಕೆ ಕೆರೆಗೆ ಹಾರಿದ 14 ವರ್ಷದ ಮಗಳು ; ರಕ್ಷಿಸಲು ಹೋದ ತಾಯಿಯೂ ಮುಳುಗಿ ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement