ಕರ್ನಾಟಕದಲ್ಲಿ ಹಲವೆಡೆ ಭಾರಿ ಮಳೆ ಮುನ್ಸೂಚನೆ ; ಬುಧವಾರ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, ಉಳಿದೆಡೆ ಯೆಲ್ಲೋ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಜುಲೈ 29, 30ರಂದು ರಾಜ್ಯಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬುಧವಾರ (ಜುಲೈ 29) 3 ಜಿಲ್ಲೆಗೆ ಆರೆಂಜ್‌ ಅಲರ್ಟ್‌ , ಉಳಿದ 28 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಮುನ್ಸೂಚನೆಯ ಪ್ರಕಾರ, ರಾಜ್ಯದಾದ್ಯಂತ ಮುಂದಿನ 4 ದಿನಗಳ ಕಾಲ ಮಳೆ … Continued

ಬರದ ನಡುವೆ ರಾಜ್ಯಕ್ಕೆ ಆಘಾತ : ತಮಿಳುನಾಡಿಗೆ ಪ್ರತಿದಿನ 3500 ಕ್ಯೂಸೆಕ್ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

ನವದೆಹಲಿ/ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕ ಸರ್ಕಾರಕ್ಕೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿನ ಜಲಾಶಯಗಳ ನೀರಿನ ಸಂಗ್ರಹ, ಮಳೆಯ ಪ್ರಮಾಣ ಹಾಗೂ ಒಳಹರಿವನ್ನು ಪರಾಮರ್ಶಿಸಲು ನಡೆದ ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಮಿತಿಯು ಎರಡೂ … Continued

ಸಿಜೆಪಿ ಪ್ರತಿಭಟನೆ | ವಿದ್ಯಾರ್ಥಿ ಪ್ರತಿಭಟನಾಕಾರರ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಸುಪ್ರೀಂಕೋರ್ಟ್ ; ಅಪ್ರಾಪ್ತರ ತಕ್ಷಣ ಬಿಡುಗಡೆಗೆ ಸೂಚನೆ

ನವದೆಹಲಿ : ದೆಹಲಿ ಜಂತರ್ ಮಂತರ್ ಹಾಗೂ ವಿವಿಧ ರಾಜ್ಯಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಇತ್ತೀಚಿನ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರತಿಭಟನಾಕಾರರ ವಿರುದ್ಧ ಯಾವುದೇ ಬಲವಂತದ (Coercive) ಕ್ರಮ ಕೈಗೊಳ್ಳಬಾರದು ಎಂದು ಮಂಗಳವಾರ ಮಹತ್ವದ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ ನೇತೃತ್ವದ, … Continued

ವಿಡಿಯೊಗಳು | ಜಪಾನ್‌ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ; ಸುನಾಮಿ ಭೀತಿ : ಭೂಮಿ ಹೇಗೆ ನಡುಗಿತು ನೋಡಿ

ಟೋಕಿಯೊ: ಜಪಾನ್‌ನ ದಕ್ಷಿಣ ಭಾಗದ ಪ್ರಮುಖ ದ್ವೀಪ ‘ಕ್ಯೂಷು'(Kyushu)d ಕುಮಮೊಟೊ (Kumamoto) ಪ್ರಾಂತ್ಯದಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಸಮುದ್ರದ ಮೇಲ್ಮೈಯಿಂದ 10 ಕಿಲೋಮೀಟರ್ ಆಳದಲ್ಲಿ ದಾಖಲಾಗಿರುವುದಾಗಿ ಜಪಾನ್ ಹವಾಮಾನ ಇಲಾಖೆ (Japan Meteorological Agency – JMA) ತಿಳಿಸಿದೆ. ಭೂಕಂಪದ ಪರಿಣಾಮವಾಗಿ ಹಲವರಿಗೆ ಗಾಯಗಳಾಗಿರುವುದಾಗಿ ಹಾಗೂ … Continued

ಮೇಕೆದಾಟು ಯೋಜನೆಗೆ ತಮಿಳುನಾಡು ಸೇರಿ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ : ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ : ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಪ್ರಸ್ತಾವಿತ ಮೇಕೆದಾಟು ಸಮತೋಲನ ಜಲಾಶಯ (Balancing Reservoir) ನಿರ್ಮಾಣಕ್ಕೆ ಕರ್ನಾಟಕವು ಕೆಳಹರಿವು ರಾಜ್ಯಗಳಾದ ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸೋಮವಾರ (ಜುಲೈ 27) ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ಈ ಕುರಿತು 2018ರಲ್ಲಿ ಸುಪ್ರೀಂ ಕೋರ್ಟ್ ನೀಡಿದ … Continued

ನೀವು ಸಂಭ್ರಮದಲ್ಲಿ ಮುಳುಗಿದಿರಿ, ಪ್ರತಿಭಟನಾಕಾರರು ಹಸಿವಿನಿಂದ ನರಳುತ್ತಿದ್ದರು”; ಸಿಜೆಪಿ ನಾಯಕರ ನೃತ್ಯ ವಿಡಿಯೊಗಳಿಗೆ ಭಾರಿ ಆಕ್ರೋಶ

ನವದೆಹಲಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಯಾದ ನಂತರ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಾಯಕರು ನೃತ್ಯ ಮಾಡಿ ಸಂಭ್ರಮಿಸಿದ ವಿಡಿಯೊಗಳಿಂದ ಆರಂಭವಾದ ವಿವಾದ ಇನ್ನೂ ತಣ್ಣಗಾಗಿಲ್ಲ. ಪ್ರತಿಭಟನೆ ಮುಕ್ತಾಯವಾದ ತಕ್ಷಣವೇ ಈ ರೀತಿಯ ಸಂಭ್ರಮಾಚರಣೆ ನಡೆಸಿರುವುದು “ಸೂಕ್ಷ್ಮತೆ ಮತ್ತು ಸಂವೇದನಾಶೀಲತೆಯ ಕೊರತೆ” ಎಂದು ಸಿಜೆಪಿಗೆ ಸಂಬಂಧಿಸಿದ ಅನೇಕರು ಟೀಕಿಸಿದ್ದಾರೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಖಂಡಿಸಿ ಜಿರಳೆ … Continued

ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ಹವಾಮಾನ ಇಲಾಖೆ (IMD) ಮುನ್ಸೂಚನೆಯ ಪ್ರಕಾರ, ಜುಲೈ 28 ಹಾಗೂ 29ರಂದು ಕರ್ನಾಟಕದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯ ಮುನ್ಸೂಚನೆ ನೀಡಲಾಗಿದೆ. … Continued

ಮೋದಿ ಜೆನ್-ಝಡ್ ವಿಡಿಯೊಕ್ಕೆ ಫೇಸ್‌ಬುಕ್‌ನಲ್ಲಿ ತಾತ್ಕಾಲಿಕ ನಿರ್ಬಂಧ; ಈಗ ಮರುಸ್ಥಾಪನೆ…!

ನವದೆಹಲಿ: ಮೆಟಾ ಒಡೆತನದ ಫೇಸ್‌ಬುಕ್ ಪ್ಲಾಟ್‌ಫಾರ್ಮ್‌ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ಜೆನ್‌-ಝಡ್ (Gen Z) ಯುವಕರನ್ನು ಉದ್ದೇಶಿಸಿ ಬಿಡುಗಡೆ ಮಾಡಿದ್ದ ಸೆಲ್ಫಿ ಶೈಲಿಯ ವಿಡಿಯೊವನ್ನು ಭಾರತದಲ್ಲಿ ಕೆಲಕಾಲ ನಿರ್ಬಂಧಿಸಿದ ವಿದ್ಯಮಾನ ವರದಿಯಾಗಿದೆ. ಆದರೆ ಕೆಲವೇ ಗಂಟೆಗಳಲ್ಲೇ ಮತ್ತೆ ಲಭ್ಯವಾಗುವಂತೆ ಮಾಡಿದೆ. ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ಟೀಕೆಗೆ ಕಾರಣವಾಗಿದ್ದು, ಭಾರತದಲ್ಲಿ ಮೆಟಾದ ವಿಷಯ … Continued

ಕರೂರು ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ : ತಮಿಳುನಾಡು ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಚೆನ್ನೈ: ಕಳೆದ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆದ ಕರೂರು ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 41 ಮಂದಿಯ ಕುಟುಂಬಗಳಿಗೆ ತಮಿಳುನಾಡು ಸರ್ಕಾರ ನೀಡಿದ್ದ ಅನುಕಂಪ ಆಧಾರಿತ ಸರ್ಕಾರಿ ಉದ್ಯೋಗದ ಆದೇಶವನ್ನು ಮದ್ರಾಸ್ ಹೈಕೋರ್ಟ್‌ನ ಮದುರೈ ಪೀಠ ಸೋಮವಾರ (ಜುಲೈ 27) ರದ್ದುಪಡಿಸಿದೆ. ನ್ಯಾಯಮೂರ್ತಿಗಳಾದ ಸಿ.ವಿ. ಕಾರ್ತಿಕೇಯನ್ ಹಾಗೂ ಆರ್. ಶಕ್ತಿವೇಲ ಅವರ ವಿಭಾಗೀಯ ಪೀಠ, ಈ ನೇಮಕಾತಿಗಳು ಭಾರತ … Continued

ಜಂತರ್ ಮಂತರ್ ಪ್ರತಿಭಟನೆ ವೇಳೆ ಹಿಂಸಾಚಾರ: 2,873 ಅಪರಾಧ ಹಿನ್ನೆಲೆಯವರ ಗುರುತು ಪತ್ತೆ; 989 ಮಂದಿ ವಿರುದ್ಧ ಗಂಭೀರ ಪ್ರಕರಣಗಳು

ನವದೆಹಲಿ: ಕಳೆದ ವಾರ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರದ ಘಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ನೂರಾರು ಗಿಗಾಬೈಟ್‌ಗಳಷ್ಟು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ವ್ಯಂಗ್ಯಾತ್ಮಕ ರಾಜಕೀಯ ಸಂಘಟನೆಯಾದ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ … Continued