ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ ? ದೆಹಲಿಗೆ ತೆರಳಲಿರುವ ಸಿಎಂ ಡಿಕೆ ಶಿವಕುಮಾರ

ಬೆಂಗಳೂರು: ಬಹುದಿನಗಳ ನಿರೀಕ್ಷೆಯಾಗಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದಲ್ಲಿನ ರಾಜ್ಯದ ಕಾಂಗ್ರೆಸ್‌ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗೆ ವೇಗ ಸಿಕ್ಕಿದ್ದು, ಮುಖ್ಯಮಂತ್ರಿ ಡಿಕೆ ಶಿವಕುಮಾರ ಸೋಮವಾರ ದೆಹಲಿಗೆ ಭೇಟಿ ನೀಡಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ. ಮುಖ್ಯಮಂತ್ರಿ ಶಿವಕುಮಾರ ಜೊತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. … Continued

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಇನ್ಫೋಸಿಸ್‌ ಚೇರ್ಮನ್‌ ನಂದನ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚನೆ ; ಮೋದಿ ಘೋಷಣೆ

ನವದೆಹಲಿ: ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ವಿಶ್ವಾಸಾರ್ಹ, ಪಾರದರ್ಶಕ ಮತ್ತು ತಂತ್ರಜ್ಞಾನ ಆಧಾರಿತವಾಗಿಸಲು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ ನಿಲೇಕಣಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಕಾರ್ಯಪಡೆಯು ದೇಶದ ಪರೀಕ್ಷಾ ವ್ಯವಸ್ಥೆಯನ್ನು ಸಮಗ್ರವಾಗಿ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ಅದರ ಶಿಫಾರಸುಗಳ ಆಧಾರದ ಮೇಲೆ ಮುಂಬರುವ … Continued

ಹ್ಯಾಟ್ರಿಕ್ ಸಾಧನೆ ! ಗ್ಲಾಸ್ಗೋ 2026 ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟು ದಾಖಲೆ ಬರೆದ ಮೀರಾಬಾಯಿ ಚಾನು

ಗ್ಲಾಸ್ಗೋ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಒಲಿಂಪಿಕ್ ಪದಕ ವಿಜೇತೆ ಮೀರಾಬಾಯಿ ಚಾನು ಭರ್ಜರಿ ಪ್ರದರ್ಶನ ನೀಡುವ ಮೂಲಕ ಭಾರತಕ್ಕೆ ಕ್ರೀಡಾಕೂಟದ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಮಹಿಳೆಯರ 48 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಪ್ರಭುತ್ವ ಸಾಧಿಸಿದ ಅವರು, ತಮ್ಮ ಸತತ ಮೂರನೇ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕವನ್ನು ಮುಡಿಗೇರಿಸಿಕೊಳ್ಳುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಹಿಂದೆ … Continued

ವಿಡಿಯೊ | ಆನೇಕಲ್‌ ; ಧಗಧಗನೆ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು

ಬೆಂಗಳೂರು : ಆನೇಕಲ್ ತಾಲೂಕಿನ ಹಳೆ ಚಂದಾಪುರದಲ್ಲಿರುವ ಪಾರ್ಕಿಂಗ್ ಯಾರ್ಡ್‌ನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಪ್ರಾಥಮಿಕ ಮಾಹಿತಿ ಪ್ರಕಾರ, ಅಪರಾಹ್ನ ಈ ಘಟನೆ ನಡೆದಿದೆ ಎನ್ನಲಾಗಿದೆ. ಪಾರ್ಕ್ ಮಾಡಲಾಗಿದ್ದ ಒಂದು ಬಸ್ಸಿನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ.  ಬಳಿಕ ಅದರ ಪಕ್ಕದಲ್ಲಿದ್ದ ಇನ್ನೂ ಮೂರು ಬಸ್‌ಗಳಿಗೆ  ವ್ಯಾಪಿಸಿದ್ದರಿಂದ … Continued

ಸ್ವತಂತ್ರ ಭಾರತದಲ್ಲಿ ರಾಜೀನಾಮೆ ನೀಡಿದ ಕೇಂದ್ರ ಸಚಿವರು ; ರಾಜೀನಾಮೆ ನೀಡಿದ್ದು ಯಾವ ಕಾರಣಕ್ಕೆ…?

ನವದೆಹಲಿ : ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವು ವಾರಗಳಿಂದ ನಡೆದ ವಿದ್ಯಾರ್ಥಿ ನೇತೃತ್ವದ ಪ್ರತಿಭಟನೆಗಳ ನಂತರ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಅವರು ಜುಲೈ 25ರಂದು ರಾಜೀನಾಮೆ ನೀಡಿದ್ದಾರೆ. ದೇಶದ ಅತ್ಯಂತ ಮಹತ್ವದ ಪ್ರವೇಶ ಪರೀಕ್ಷೆಗಳಲ್ಲೊಂದಾದ ನೀಟ್‌ನಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಹೊಣೆ ಹೊತ್ತು ರಾಜೀನಾಮೆ … Continued

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು 2028ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ. ತಮ್ಮ ಬೆಂಬಲಿಗರು ಇನ್ನೂ ಹತ್ತು ವರ್ಷ ಸಕ್ರಿಯ ರಾಜಕೀಯದಲ್ಲಿ ಮುಂದುವರಿಯುವಂತೆ ಮನವಿ ಮಾಡಿದರೂ, ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಅವರು ಹೇಳಿದ್ದಾರೆ. ಶನಿವಾರ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ … Continued

ಮಳೆ ಕೊರತೆ : ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರ ಶಿವನಸಮುದ್ರದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಸ್ಥಗಿತ

ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಕಾವೇರಿ ನದಿಯಲ್ಲಿ ನೀರಿನ ಹರಿವು ತೀವ್ರವಾಗಿ ಕಡಿಮೆಯಾಗಿರುವುದರಿಂದ ಕರ್ನಾಟಕದ ಐತಿಹಾಸಿಕ ಹಾಗೂ ಏಷ್ಯಾದ ಮೊದಲ ಜಲವಿದ್ಯುತ್ ಸ್ಥಾವರವಾದ ಶಿವನಸಮುದ್ರ ಜಲವಿದ್ಯುತ್ ಕೇಂದ್ರ ಕಳೆದ ಕೆಲ ದಿನಗಳಿಂದ ವಿದ್ಯುತ್ ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿರುವ ಶತಮಾನಕ್ಕೂ ಹೆಚ್ಚಿನ ಅವಧಿಯ ಇತಿಹಾಸ ಹೊಂದಿರುವ ಜಲವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ … Continued

ಒಬ್ಬನನ್ನೇ ಮದುವೆಯಾದ ಮೂವರು ಸಹೋದರಿಯರು…! ವಿಡಿಯೊ ವೈರಲ್‌ ; ತೀವ್ರ ಚರ್ಚೆಗೆ ಗ್ರಾಸ

ನವದೆಹಲಿ: ಉತ್ತರ ಪ್ರದೇಶದ ಮೂವರು ಸಹೋದರಿಯರು ಒಬ್ಬ ವ್ಯಕ್ತಿಯನ್ನೇ ವಿವಾಹವಾಗಿರುವುದಾಗಿ ಹೇಳಲಾಗುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಈ ಮದುವೆ ನಿಜವೇ ಅಥವಾ ಕೇವಲ ವೈರಲ್ ಆಗಲು ರೂಪಿಸಿದ ದೃಶ್ಯವೇ ಎಂಬ ಪ್ರಶ್ನೆ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆರಂಭದಲ್ಲಿ ಸಾಮಾನ್ಯ ವೈರಲ್ ರೀಲ್ಸ್ ಎಂದು ಪರಿಗಣಿಸಲ್ಪಟ್ಟಿದ್ದ ಈ ವಿಡಿಯೊಗಳು ಇದೀಗ ಸಾಮಾಜಿಕ, ಧಾರ್ಮಿಕ … Continued

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ ಪ್ರಕರಣ: ಸುಪ್ರೀಂ ಕೋರ್ಟ್‌ ಆದೇಶದಂತೆ ಎಸ್‌ಐಟಿ ಪುನರ್ರಚನೆ

ಲಕ್ನೋ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆ ಹಣದ ದುರುಪಯೋಗ ನಡೆದಿದೆ ಎಂಬ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಯನ್ನು ಉತ್ತರ ಪ್ರದೇಶ ಸರ್ಕಾರ ಪುನರ್ರಚಿಸಿದೆ. ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನದಂತೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಹೊಸ ತನಿಖಾ ತಂಡಕ್ಕೆ ಸೇರಿಸಲಾಗಿದೆ. ಹೊಸದಾಗಿ ರಚಿಸಲಾದ ಎಸ್‌ಐಟಿಯ ಮುಖ್ಯಸ್ಥರಾಗಿ … Continued

ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ; ರಾಜಕೀಯ ಹಿನ್ನಡೆಯೋ ಅಥವಾ ಲೆಕ್ಕಾಚಾರದ ನಡೆಯೋ..?

ಉನ್ನತ ಮಟ್ಟದ ರಾಜಕೀಯ ತಂತ್ರಗಳಲ್ಲಿ ಸಮಯದ ಆಯ್ಕೆ ಎಂದಿಗೂ ಆಕಸ್ಮಿಕವಾಗಿರುವುದಿಲ್ಲ. ಅದೇ ರೀತಿ ಅಧಿಕಾರದ ಸ್ಥಾನದಿಂದ ಹಿಂದೆ ಸರಿಯುವ ನಿರ್ಧಾರಗಳೂ ಬಹುತೇಕ ದೊಡ್ಡ ರಾಜಕೀಯ ಲೆಕ್ಕಾಚಾರದ ಭಾಗವಾಗಿರುತ್ತವೆ. ಶನಿವಾರ (ಜುಲೈ 25) ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ರಾಜೀನಾಮೆ ಸಲ್ಲಿಸಿ, “ನನ್ನ ಯುವ ಸ್ನೇಹಿತರಿಗೆ” ಉದ್ದೇಶಿಸಿದ ಎರಡು ಪುಟಗಳ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. … Continued