ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ (Legislative Council Chairman) ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ಇಂದು (ಆಗಸ್ಟ್‌ 7) ರಾಜೀನಾಮೆ ನೀಡಿದ್ದಾರೆ.
ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಇಂದು, ಶುಕ್ರವಾರ ಹೊರಟ್ಟಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಜೊತೆ ಸುಮಾರು 10 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಶಿವಕುಮಾರ ಅವರು ರಾಜೀನಾಮೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಹೊರಟ್ಟಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

75 ಸದಸ್ಯ ಬಲದ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ, ಸಭಾಪತಿ ಮತ್ತು ಉಪಸಭಾಪತಿ ಎರಡೂ ಹುದ್ದೆಗಳನ್ನು ತಮ್ಮ ಆಡಳಿತ ಪಕ್ಷದಿಂದ ಆಯ್ಕೆ ಮಾಡಲು ಕಾಂಗ್ರೆಸ್ ಮುಂದಾಗಿದೆ. ಇದರ ನಡುವೆಯೇ ಬಸವರಾಜ ಹೊರಟ್ಟಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಯಾವುದೇ ಒತ್ತಡವಿಲ್ಲದೆ, ಸಂಪೂರ್ಣ ಸ್ವಇಚ್ಛೆಯಿಂದಲೇ ತಾವು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹೊರಟ್ಟಿ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ನೂತನ ಸಭಾಪತಿ ಆಯ್ಕೆಯಾಗುವವರೆಗೆ ಬಸವರಾಜ ಹೊರಟ್ಟಿ ಅವರೇ ಹಂಗಾಮಿ ಸಭಾಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement