ಅಳ್ನಾವರ : ಶಾಲಾ ವಾಹನ ಗುದ್ದಿ 2 ವರ್ಷದ ಮಗು ಸಾವು

ಧಾರವಾಡ : ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಬಂದಿದ್ದ ವಾಹನ ಡಿಕ್ಕಿ ಹೊಡೆದು ಸುಮಾರು ಎರಡು ವರ್ಷದ ಮಗು ಮೃತಪಟ್ಟ ಹೃದಯವಿದ್ರಾವಕ ಘಟನೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಹುಲಿಕೇರಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ ಎಂದುವರದಿಯಾಗಿದೆ.
ಮೃತ ಮಗುವನ್ನು ಹುಲ್ಲಿಕೇರಿ ಗ್ರಾಮದ ಲುಕ್ಮಾನ್ ಬೋಗೂರ (2) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಕರೆದೊಯ್ಯಲು ಶಾಲಾ ವಾಹನ ಹುಲಿಕೇರಿ ಗ್ರಾಮಕ್ಕೆ ಬಂದಿತ್ತು. ಈ ವೇಳೆ ರಸ್ತೆ ಬದಿಯಲ್ಲಿ ನಿಂತಿದ್ದ ಮಗುವಿಗೆ ವಾಹನ ಗುದ್ದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಮಗು ಸ್ಥಳದಲ್ಲೇ ಮೃತಪಟ್ಟಿದೆ ಎಂದು ಹೇಳಲಾಗಿದೆ.
ಈ ಘಟನೆ ಅಳ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು : ಪಂಚತಾರಾ ಹೊಟೇಲ್‌ನಲ್ಲಿ ರೂಂ ಬುಕ್ ಮಾಡಿ ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ?!

ನಿಮ್ಮ ಕಾಮೆಂಟ್ ಬರೆಯಿರಿ

advertisement