ಗೋಕಾಕ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಬೆಳಗಾವಿ: ಜಿಲ್ಲೆಯ ಗೋಕಾಕ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದ ರೇಣುಕಾ ಗಣಾಚಾರಿ ಹೆರಿಗೆ ವೇಳೆ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡದ ಯಶಸ್ವಿ ಪ್ರಯತ್ನದಿಂದ ಹೆರಿಗೆ ಸುಗಮವಾಗಿ ನಡೆದಿದ್ದು, ತಾಯಿ ಹಾಗೂ ಮೂವರು ನವಜಾತ ಶಿಶುಗಳು ಆರೋಗ್ಯವಾಗಿದ್ದಾರೆ.
ಡಾ. ಶ್ವೇತಾ ನಾಯಿಕ ನೇತೃತ್ವದಲ್ಲಿ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿ ಹೆರಿಗೆ ಪ್ರಕ್ರಿಯೆಯನ್ನು ನಿರ್ವಹಿಸಿದ್ದಾರೆ. ಹೆರಿಗೆಯ ಬಳಿಕ ತಾಯಿ ಮತ್ತು ಮೂವರು ಶಿಶುಗಳನ್ನು ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಇರಿಸಿ ಆರೈಕೆ ನೀಡಲಾಗುತ್ತಿದೆ.
ಕುಟುಂಬದಲ್ಲಿ ತ್ರಿವಳಿ ಮಕ್ಕಳ ಜನನವಾಗಿರುವ ಈ ವಿಷಯ ಆಸ್ಪತ್ರೆಯ ಸಿಬ್ಬಂದಿ ಹಾಗೂ ಕುಟುಂಬಸ್ಥರಲ್ಲಿ ಸಂತಸ ಮೂಡಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಅಳ್ನಾವರ : ಶಾಲಾ ವಾಹನ ಗುದ್ದಿ 2 ವರ್ಷದ ಮಗು ಸಾವು

ನಿಮ್ಮ ಕಾಮೆಂಟ್ ಬರೆಯಿರಿ

advertisement