ಚೀನಾದ ಪ್ರಾಯೋಗಿಕ ಬುಲೆಟ್ ರೈಲಿನಿಂದ ವಿಶ್ವದಾಖಲೆ : ಕೇವಲ 5.3 ಸೆಕೆಂಡ್‌ಗಳಲ್ಲಿ 800 ಕಿಮೀ ವೇಗ ತಲುಪಿದ ರೈಲು !

ಹುಬೈ: ಚೀನಾದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಪ್ರಾಯೋಗಿಕ ಮ್ಯಾಗ್ಲೆವ್ ರೈಲು ( experimental maglev train) ಅತಿ ಕಡಿಮೆ ಅವಧಿಯಲ್ಲಿ ಅತ್ಯಂತ ವೇಗವನ್ನು ತಲುಪಿದ್ದು, ತನ್ನದೇ ದಾಖಲೆಯನ್ನು ಮತ್ತೊಮ್ಮೆ ಮುರಿದಿದೆ. ಕೇವಲ 5.3 ಸೆಕೆಂಡ್‌ಗಳಲ್ಲಿ ಶೂನ್ಯದಿಂದ ಅದು ಗಂಟೆಗೆ 800 ಕಿಲೋಮೀಟರ್ ವೇಗಕ್ಕೆ ತಲುಪುವ ಮೂಲಕ ನೂತನ ಸಾಧನೆ ಮಾಡಿದೆ. ಕಳೆದ ಆರು ತಿಂಗಳಲ್ಲಿ ಇದು ಮೂರನೇ ಬಾರಿಗೆ … Continued

ಕರ್ನಾಟಕದ 4 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ಕರಲವು ಜಿಲ್ಲೆಗಳಲ್ಲಿ ಆಗಸ್ಟ್ 13ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿವೆ. ಗುರುವಾರ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ … Continued

ಮನೆಯಲ್ಲಿ ಹಣ ಪತ್ತೆ ಪ್ರಕರಣ ; ಮಾಜಿ ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ 3 ಆರೋಪಗಳು ಸಾಬೀತು : ಸದನ ಸಮಿತಿ

ನವದೆಹಲಿ: ದೆಹಲಿ ಹೈಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ಅಧಿಕೃತ ನಿವಾಸದಲ್ಲಿ ಭಾರೀ ಪ್ರಮಾಣದ ನಗದು ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ರಚಿಸಿದ್ದ ತನಿಖಾ ಸಮಿತಿಯು ನ್ಯಾಯಮೂರ್ತಿ ವರ್ಮಾ ವಿರುದ್ಧ ಹೊರಿಸಲಾದ ಮೂರೂ ಆರೋಪಗಳೂ ಸಾಬೀತಾಗಿವೆ ಎಂದು ತೀರ್ಮಾನಿಸಿದೆ. ನವದೆಹಲಿಯ 30, ತುಘಲಕ್ ಕ್ರೆಸೆಂಟ್‌ನಲ್ಲಿರುವ ಅವರ ಅಧಿಕೃತ ನಿವಾಸದ ಸ್ಟೋರ್‌ರೂಮ್‌ನಲ್ಲಿ … Continued

ನೂತನ ಸಚಿವರಿಗೆ ಕೊನೆಗೂ ಖಾತೆ ಹಂಚಿಕೆ: ಇಬ್ಬರಿಗೆ ಖಾತೆ ಬದಲು; ಯಾರಿಗೆ ಯಾವ ಖಾತೆ ? ಇಲ್ಲಿದೆ ವಿವರ

ಬೆಂಗಳೂರು : ಮುಖ್ಯಮಂತ್ರಿ ಡಿಕೆ ಶಿವಕುಮಾರ ಸಂಪುಟದ ಮಂತ್ರಿಗಳಿಗೆ ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಆಗಸ್ಟ್ 3ರಂದು ಪ್ರಮಾಣ ವಚನ ಸ್ವೀಕರಿಸಿದ 19 ನೂತನ ಸಚಿವರಿಗೆ ಖಾತೆ (Portfolios) ಕೊನೆಗೂ ಖಾತೆ ಹಂಚಿಕೆ ಮಾಡಲಾಗಿದ್ದು, ಇದರಲ್ಲಿ ಕೆಲ ಬದಲಾವಣೆ ಮಾಡಲಾಗಿದೆ. ರಾಮಲಿಂಗಾರೆಡ್ಡಿ ಹಾಗೂ ಮುನಿಯಪ್ಪನವರ ಖಾತೆಗಳನ್ನ ಬದಲಾವಣೆ ಮಾಡಲಾಗಿದೆ. ಪ್ರಮುಖವಾಗಿ … Continued

ಕರ್ನಾಟಕದಲ್ಲಿ ಗುಟ್ಕಾ, ಪಾನ್‌ ಮಸಾಲಾ ಮಾರಾಟಕ್ಕೆ ಒಂದು ವರ್ಷದ ನಿಷೇಧ ; ಸರ್ಕಾರದಿಂದ ಆದೇಶ

ಬೆಂಗಳೂರು: ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾಗಳ ಉತ್ಪಾದನೆ, ಶೇಖರಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯಾದ್ಯಂತ ಒಂದು ವರ್ಷದ ಅವಧಿಗೆ ಸಂಪೂರ್ಣವಾಗಿ ನಿಷೇಧಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆಹಾರ ಭದ್ರತೆ ಮತ್ತು ಗುಣಮಟ್ಟ ಕಾಯ್ದೆ-2006 ರ ಸೆಕ್ಷನ್ 30(2)(ಎ) ಹಾಗೂ ಆಹಾರ ಭದ್ರತೆ ಮತ್ತು ಗುಣಮಟ್ಟ (ಮಾರಾಟ ನಿಷೇಧ … Continued

ಟಾಟಾ ಸನ್ಸ್ ಅಧ್ಯಕ್ಷ ಸ್ಥಾನಕ್ಕೆ ಎನ್. ಚಂದ್ರಶೇಖರನ್ ರಾಜೀನಾಮೆ

ಮುಂಬೈ: ಟಾಟಾ ಸಮೂಹದ ಮಹತ್ವದ ನಿರ್ಧಾರವೊಂದರಲ್ಲಿ ಟಾಟಾ ಸನ್ಸ್‌ನ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 2027ರ ಫೆಬ್ರವರಿಯಲ್ಲಿ ತಮ್ಮ ಪ್ರಸ್ತುತ ಅವಧಿ ಪೂರ್ಣಗೊಂಡ ಬಳಿಕ ಮರುನೇಮಕಗೊಳ್ಳಲು ತಾವು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಗಸ್ಟ್ 18ರಂದು ನಡೆಯಲಿರುವ ಟಾಟಾ ಸನ್ಸ್‌ನ ವಾರ್ಷಿಕ ಸಾಮಾನ್ಯ ಸಭೆ (ಎಜಿಎಂ)ಗೂ ಮುನ್ನ ಈ ಬೆಳವಣಿಗೆ ನಡೆದಿದೆ. … Continued

ಕೆಲವರನ್ನೇ ಸೊಳ್ಳೆಗಳು ಹೆಚ್ಚು ಕಚ್ಚುತ್ತವೆ ಯಾಕೆ ? ಅಧ್ಯಯನದಲ್ಲಿ ಕಾರಣಗಳು ಬಹಿರಂಗ…

 ಮನೆ ಸುತ್ತಮುತ್ತ ಮಾತ್ರವಲ್ಲ, ಜಗತ್ತಿನ ಯಾವುದೇ ಭಾಗಕ್ಕೆ ಪ್ರವಾಸ ಹೋದರೂ ಕೆಲವರನ್ನು ಸೊಳ್ಳೆಗಳು ಬಿಡುವುದೇ ಇಲ್ಲ. ಕೆಲವರಿಗೆ ಒಂದು ಸೊಳ್ಳೆ ಕಚ್ಚಿದರೂ ಸಾಕು, ದೊಡ್ಡದಾಗಿ ಊದಿಕೊಂಡು ತೀವ್ರವಾಗಿ ತುರಿಸುವ ಗುಳ್ಳೆಗಳು ಕಾಣಿಸಿಕೊಂಡು ವಾರಗಳ ಕಾಲ ಕಾಡುತ್ತವೆ. ಆದರೆ ಅವರ ಜೊತೆಯಲ್ಲಿರುವ ಕೆಲವರಿಗೆ ಸೊಳ್ಳೆ ಕಚ್ಚಿದರೂ ಯಾವುದೇ ಗುರುತು ಕಾಣಿಸುವುದಿಲ್ಲ. ಇನ್ನೂ ಕೆಲವರಿಗೆ ಕೇವಲ ಸಣ್ಣ ಕೆಂಪು … Continued

ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ : ಪ್ರಜ್ವಲ್‌ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್‌ ಪತ್ತೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿ  ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್ ರೇವಣ್ಣನನ್ನು ಇರಿಸಲಾಗಿರುವ ಬ್ಯಾರಕ್‌ನಲ್ಲಿ ಮೊಬೈಲ್‌ ಫೋನ್‌ ಪತ್ತೆಯಾಗಿದ್ದು, ಈತ ಅದನ್ನು ಬಳಸುತ್ತಿದ್ದ ಎಂಬ ಅನುಮಾನ ವ್ಯಕ್ತವಾಗಿದೆ. ಅಪರಾಧ ವಿಭಾಗದ ಅಧಿಕಾರಿಗಳು ನಡೆಸಿದ ದಿಢೀರ್ ತಪಾಸಣೆ ವೇಳೆ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್‌ ಫೋನ್‌ … Continued

ಕರ್ನಾಟಕ ವಿಧಾನಸಭೆಗೆ ಆಗಸ್ಟ್ 14 ರಂದು ನೂತನ ಸ್ಪೀಕರ್ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಆಗಸ್ಟ್ 14ರಂದು ನಡೆಯಲಿದೆ. ಪ್ರಸ್ತುತ ವಿಧಾನಸಭೆಯಲ್ಲಿ ಸ್ಪೀಕರ್ ಹಾಗೂ ಉಪ ಸ್ಪೀಕರ್ ಎರಡೂ ಹುದ್ದೆಗಳು ಖಾಲಿಯಾಗಿದ್ದು, ಸ್ಪೀಕರ್ ಚುನಾವಣೆಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಆಗಸ್ಟ್ 3ರಂದು ಹಿರಿಯ ಕಾಂಗ್ರೆಸ್ ಶಾಸಕ ಟಿ.ಬಿ. ಜಯಚಂದ್ರ ಅವರನ್ನು ಹಂಗಾಮಿ ಸ್ಪೀಕರ್ (ಪ್ರೊ-ಟೆಮ್ ಸ್ಪೀಕರ್) ಆಗಿ ನೇಮಕ ಮಾಡಿದ್ದಾರೆ. … Continued