ಕಾರವಾರ: ಉತ್ತರ ಕನ್ನಡ ಜಿಲ್ಲಾ ಕೇಂದ್ರವಾದ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಮಂದ ಬೆಳಕಿದ್ದ ಕಾರಣ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಲಕ್ಷ್ಮಣ ಸವದಿ ಅವರು ಮೊಬೈಲ್ ಟಾರ್ಚ್ ಬೆಳಕನ್ನು ಬಳಸಿ ಭಾಷಣ ಮಾಡಬೇಕಾಯಿತು.
ನಗರದ ಕಾಜುಭಾಗದಲ್ಲಿರುವ ಪೊಲೀಸ್ ಪರೇಡ್ ಮೈದಾನದಲ್ಲಿ ಶನಿವಾರ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಆಕರ್ಷಕ ಪಥಸಂಚಲನದಿಂದ ಗೌರವ ವಂದನೆ ಸ್ವೀಕರಿಸಿದರು.
ಧ್ವಜಾರೋಹಣ ನೆರವೇರಿಸಿದ ಬಳಿಕ ಭಾಷಣ ಆರಂಭಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಮಂದ ಬೆಳಕಿನಲ್ಲಿ ಸಿದ್ಧಪಡಿಸಿದ ಬಾಷಣ ಓದಲು ಕಷ್ಟಪಡಬೇಕಾಯಿತು. ಕೊನೆಗೆ ಅನಿವಾರ್ಯವಾಗಿ ಮೊಬೈಲ್ ಟಾರ್ಚ್ ಬಳಸಬೇಕಾಯಿತು. ವೇದಿಕೆಯಲ್ಲಿ ಲೈಟಿಂಗ್ ವ್ಯವಸ್ಥೆ ಇಲ್ಲದ ಪರಿಣಾಮ ಮಂದ ಬೆಳಕಿನಲ್ಲಿ ಸಿದ್ಧಪಡಿಸಿದ ಭಾಷಣ ಓದಲು ತಡವಡಿಸಿದ ಅವರು ಕೊನೆಗೆ ಮೊಬೈಲ್ ಟಾರ್ಚ್ ಹಾಕಿಕೊಂಡು ಭಾಷಣ ಓದಲಾರಂಭಿಸಿದರು.
ಇಂತಹ ಮಹತ್ವದ ಕಾರ್ಯಕ್ರಮಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.


ನಿಮ್ಮ ಕಾಮೆಂಟ್ ಬರೆಯಿರಿ