ಎಲ್ಲರಿಗೂ ಸ್ವಾತಂತ್ರ್ಯೋತ್ಸವದ ಶುಭಾಶಯಗಳು

ಶಿರಸಿ : 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಬಂಧನ

ಶಿರಸಿ: ಕಳ್ಳತನ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಬರೋಬ್ಬರಿ 46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ.
ಉಡುಪಿ ಜಿಲ್ಲೆಯ ಪರ್ಕಳ ಪೋಸ್ಟ್‌ ವ್ಯಾಪ್ತಿಯ ಹೇರ್ಗ ಗ್ರಾಮದ ನಿವಾಸಿ ಮಹಮ್ಮದ್ ಯೂಸುಫ್ (68) ಬಂಧಿತ ಆರೋಪಿ. ಶಿರಸಿ ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 1980ರಲ್ಲಿ ದಾಖಲಾಗಿದ್ದ ಮೂರು ಕಳ್ಳತನ ಪ್ರಕರಣಗಳಲ್ಲಿ ಈತ ಆರೋಪಿಯಾಗಿದ್ದ. ಭಾರತೀಯ ದಂಡ ಸಂಹಿತೆಯ ಕಲಂ 454, 457 ಹಾಗೂ 380ರ ಅಡಿಯಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಆದರೆ ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಈತ ತಲೆಮರೆಸಿಕೊಂಡು 46 ವರ್ಷಗಳಿಂದ ತಲೆತಪ್ಪಿಸಿಕೊಂಡಿದ್ದ. ಈತನನ್ನು ಬಂಧಿಸಲು ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ವಿಶೇಷ ತಂಡ ರಚಿಸಿ ತಾಂತ್ರಿಕ ಮಾಹಿತಿ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಸಿ ಈತನ ಇರುವಿಕೆಯ ಸುಳಿವು ಪತ್ತೆಹಚ್ಚಿ, ಆಗಸ್ಟ್ 14ರಂದು ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
46 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ ಪೊಲೀಸ್ ತಂಡದ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ವಿಡಿಯೋ | ಚಪ್ಪಲಿಗಳ ರಾಶಿ ಮಧ್ಯೆ ಕಳೆದುಹೋದ ಚಪ್ಪಲಿ ; ಆದ್ರೆ ವ್ಯಕ್ತಿಗೆ ಅದನ್ನು ಹುಡುಕಿಕೊಟ್ಟಿತು ಚಾಟ್‌ಜಿಪಿಟಿ....!

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement