ಬ್ರಹ್ಮಾವರ : ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ !

ಉಡುಪಿ :  ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟರು ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮೆಹಬೂಬ್ ಅಲಿ ಅವರು ಲಾರಿ ಚಾಲಕರಾಗಿದ್ದರು. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಮಗ ಶಾಹಿದ್ ಅಲಿಯನ್ನು ತಂದೆ-ತಾಯಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ.

ಭಾನುವಾರ ರಾತ್ರಿ ಮನೆಯಲ್ಲಿ ತಂದೆ-ತಾಯಿ ಜೊತೆ ಶಾಹಿದ್ ಅಲಿ ಜಗಳವಾಡಿದ್ದಾನೆ. ಈ ವೇಳೆ ತೀವ್ರ ಸಿಟ್ಟಿಗೆದ್ದ ಆತ ಮನೆಯಲ್ಲಿದ್ದ ಸುತ್ತಿಗೆಯನ್ನು ತೆಗೆದುಕೊಂಡು ಇಬ್ಬರ ತಲೆ ಮೇಲೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡ ದಂಪತಿ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಹತ್ಯೆಯ ಬಳಿಕ ಆರೋಪಿಯೇ ಬ್ರಹ್ಮಾವರ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ ಎನ್ನಲಾಗಿದೆ.
ಬ್ರಹ್ಮಾವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಶಾಹಿದ್ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಎಲ್ಲ ಆಯಾಮಗಳಲ್ಲಿ ಪೊಲೀಸರು ತೀವ್ರ ತನಿಖೆ ಮುಂದುವರಿಸಿದ್ದಾರೆ.

ಪ್ರಮುಖ ಸುದ್ದಿ :-   ದೊಡ್ಡಬಳ್ಳಾಪುರ : ಇನ್‌ಸ್ಟಾಗ್ರಾಂನಲ್ಲಿ ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳ ಸಂಪರ್ಕ; ವ್ಯಕ್ತಿಯ ಬಂಧನ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement