ಸಂಪುಟ ಸಲಹೆ ಮೇರೆಗೆ ಕೆಪಿಎಸ್‌ಸಿ ಅಧ್ಯಕ್ಷ ಸಾಹುಕಾರನನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ

ಬೆಂಗಳೂರು: ಭ್ರಷ್ಟಾಚಾರ ಮತ್ತು ದೊಡ್ಡ ಪ್ರಮಾಣದ ಅಕ್ರಮಗಳ ಆರೋಪಗಳ ಸಂಬಂಧ ರಾಜ್ಯ ಸಚಿವ ಸಂಪುಟ ಸಲಹೆಯ ಮೇರೆಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು, ಮಂಗಳವಾರ ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ(KPSC)ದ ಅಧ್ಯಕ್ಷ ಶಿವಶಂಕರಪ್ಪ ಎಸ್ ಸಾಹುಕಾರ ಅವರನ್ನು ಮತ್ತೆ ಅಮಾನತುಗೊಳಿಸಿದ್ದಾರೆ. ಜುಲೈ 13ರಂದು ರಾಜ್ಯಪಾಲರು ಶಿವಶಂಕರಪ್ಪ ಎಸ್ ಸಾಹುಕಾರ ಅವರನ್ನು ಅಮಾನತುಗೊಳಿಸಿದ್ದರು. ಬಳಿಕ ರಾಜ್ಯ ಸಚಿವ … Continued

ಮೋದಿ 3.0 ಸಚಿವ ಸಂಪುಟಕ್ಕೆ ಶೀಘ್ರ ಮೇಜರ್ ಸರ್ಜರಿ ? 12 ಖಾಲಿ ಸ್ಥಾನಗಳಿಗೆ ಯಾರಿಗೆ ಅವಕಾಶ, ಯಾರಿಗೆ ಕೊಕ್‌ ?

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಕೆಲದಿನಗಳ ಹಿಂದೆ ತನ್ನ ನೂತನ ರಾಷ್ಟ್ರೀಯ ಪದಾಧಿಕಾರಿಗಳನ್ನು ಘೋಷಿಸಿದ ಬೆನ್ನಲ್ಲೇ ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಪುನರ್ರಚನೆ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಜೋರಾಗಿವೆ. 2029ರ ಲೋಕಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, ಜೊತೆಗೆ ಮುಂಬರುವ ವಿವಿಧ ರಾಜ್ಯ ವಿಧಾನಸಭೆ ಚುನಾವಣೆಗಳ ಲೆಕ್ಕಾಚಾರವನ್ನು ಗಮನದಲ್ಲಿಟ್ಟುಕೊಂಡು … Continued

ಉಡುಪಿ: ದೇವಸ್ಥಾನದ ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಉಡುಪಿ: ನಗರದ ತೆಂಕಪೇಟೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಮೃತ ವಿದ್ಯಾರ್ಥಿಯನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆ ನಿವಾಸಿ ಆದಿತ್ಯ ನಾಯಕ (15) ಎಂದು ಗುರುತಿಸಲಾಗಿದೆ. ದೇವಸ್ಥಾನದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮಕ್ಕೆ ಸಂಬಂಧಿಯೊಂದಿಗೆ ಆಗಮಿಸಿದ್ದ ಆದಿತ್ಯ, ಈ ವೇಳೆ ಕೆರೆಯಲ್ಲಿ ಕೆಲ ಭಕ್ತರು … Continued

ಮಾಸ್ಕೋದಲ್ಲಿ ಅಮೆರಿಕ ಸೇನಾ ವಿಮಾನ ಲ್ಯಾಂಡಿಂಗ್‌ ; ʼತನಗೆ ಗೊತ್ತೆ ಇಲ್ಲ’ ಎಂದ ರಷ್ಯಾ ; ಈ ರಹಸ್ಯ ಹಾರಾಟದ ಮರ್ಮವೇನು?

ಮಾಸ್ಕೋ: ಅಮೆರಿಕ ವಾಯುಪಡೆಯ ಬೋಯಿಂಗ್ C-17A ಗ್ಲೋಬ್‌ಮಾಸ್ಟರ್ III (Globemaster III) ಎಂಬ ಭಾರೀ ಸೇನಾ ಸರಕು ಸಾಗಣೆ ವಿಮಾನ ಸೋಮವಾರ ಬೆಳಿಗ್ಗೆ ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಇಳಿದಿರುವುದು ಜಾಗತಿಕ ಮಟ್ಟದಲ್ಲಿ ಕುತೂಹಲ ಮತ್ತು ಊಹಾಪೋಹಗಳಿಗೆ ಕಾರಣವಾಗಿದೆ. ವಿಮಾನದ ಆಗಮನದ ಕುರಿತು ರಷ್ಯಾ ತನಗೆ ಯಾವುದೇ ಮಾಹಿತಿ ಇಲ್ಲ ಎಂದು ಅಧಿಕಾರಿಗಳು ಹೇಳಿರುವುದು ಮತ್ತಷ್ಟು ಚರ್ಚೆಗೆ … Continued

ಗೋವಾ ಭೂ ಕಬಳಿಕೆ-ಹಣ ಅಕ್ರಮ ವರ್ಗಾವಣೆ ಪ್ರಕರಣ; ಆರೋಪಿಯ ಕಾರವಾರದ ನಿವಾಸದ ಮೇಲೆ ಇ.ಡಿ. ದಾಳಿ

ಕಾರವಾರ : ಗೋವಾದ ಬಹುಕೋಟಿ ರೂಪಾಯಿ ಮೌಲ್ಯದ ಭೂ ಕಬಳಿಕೆ ಹಾಗೂ ಹಣ ಅಕ್ರಮ ವರ್ಗಾವಣೆ (ಮನಿ ಲಾಂಡರಿಂಗ್) ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಮಂಗಳವಾರ ಕಾರವಾರದ ಕೊಡಿಬಾಗ್‌ನಲ್ಲಿರುವ ಸುಲೈಮಾನ್ ಖಾನ್ ಸಿದ್ದೀಕ್ ಅವರ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಕೊಡಿಬಾಗ್‌ನ ಮಿಡ್‌ಮ್ಯಾಕ್ ಆರ್ಕಿಡ್ ಅಪಾರ್ಟ್‌ಮೆಂಟ್‌ನಲ್ಲಿರುವ ಸಿದ್ದೀಕ್ ಅವರ ಮನೆಗೆ ಭೇಟಿ ನೀಡಿದ … Continued

ಸಮುದ್ರಕ್ಕೆ ಜ್ವರ ! ಸೂಪರ್ ಎಲ್‌ ನಿನೋದಿಂದ ಅತ್ಯಧಿಕ ದಾಖಲೆ ಮಟ್ಟಕ್ಕೆ ಏರಿದ ಸಾಗರಗಳ ಉಷ್ಣತೆ ; ಇದು ಏಕೆ ಆತಂಕಕಾರಿ ?

 ವಿಶ್ವದ ಸಮುದ್ರಗಳಲ್ಲಿ ಇದುವರೆಗೆ ದಾಖಲಾಗಿರುವ ಅತಿ ಹೆಚ್ಚು ತಾಪಮಾನ ದಾಖಲಾಗಿದ್ದು, ಮಾನವಸೃಷ್ಟಿಯ ಹವಾಮಾನ ಬದಲಾವಣೆ ಹಾಗೂ ಉಷ್ಣವಲಯದ ಪೆಸಿಫಿಕ್ ಮಹಾಸಾಗರದಲ್ಲಿ ಸಕ್ರಿಯವಾಗಿರುವ ಪ್ರಬಲ ಎಲ್‌ ನಿನೋ ಪರಿಣಾಮವೇ ಇದಕ್ಕೆ ಪ್ರಮುಖ ಕಾರಣಗಳಾಗಿವೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ. ಸಮುದ್ರದ ಮೇಲ್ಮೈ ಉಷ್ಣತೆಯ ಈ ಅಸಾಮಾನ್ಯ ಏರಿಕೆ ಕೇವಲ ಸಮುದ್ರ ಜೀವವೈವಿಧ್ಯಕ್ಕಷ್ಟೇ ಅಲ್ಲ, ಕರಾವಳಿ ಜನಜೀವನ, ಮೀನುಗಾರಿಕೆ, ದ್ವೀಪ … Continued

ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಕಡ್ಡಾಯ ಆಚರಣೆಯಲ್ಲ’: ಅಲಹಾಬಾದ್ ಹೈಕೋರ್ಟ್

ಲಕ್ನೋ : ಶಾಲೆ ನಿಗದಿಪಡಿಸಿರುವ ಸಮವಸ್ತ್ರದ ಜೊತೆಗೆ ಹಿಜಾಬ್‌ (ತಲೆ ಸ್ಕಾರ್ಫ್‌) ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್‌ ಹೈಕೋರ್ಟ್‌ ತಿರಸ್ಕರಿಸಿದೆ. ಹಿಜಾಬ್‌ ಧರಿಸುವುದು ಇಸ್ಲಾಂ ಧರ್ಮದ ಅವಿಭಾಜ್ಯ ಮತ್ತು ಕಡ್ಡಾಯ ಆಚರಣೆ ಎಂಬುದನ್ನು ಸಾಬೀತುಪಡಿಸುವ ಸಮರ್ಪಕ ದಾಖಲೆಗಳನ್ನು ಅರ್ಜಿದಾರರು ಸಲ್ಲಿಸಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಆಗಸ್ಟ್‌ 21ರಂದು ನ್ಯಾಯಮೂರ್ತಿಗಳಾದ … Continued

ಮೂವರು ಮಕ್ಕಳ ಜೊತೆ ತುಂಗಾ ನದಿಗೆ ಹಾರಿದ ಮಹಿಳೆ : ತಾಯಿ – ಒಂದು ಮಗುವಿನ ರಕ್ಷಣೆ, ಮತ್ತಿಬ್ಬರಿಗೆ ಹುಡುಕಾಟ

ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆ ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಘಟನೆ ಸೋಮವಾರ ಸಂಜೆ  ನಡೆದಿದೆ ಎಂದು ವರದಿಯಾಗಿದೆ. ಶಿವಮೊಗ್ಗದ ಅರಕೆರೆಯ ದೇವಾಲಯ ಪಕ್ಕದ ರೈಲ್ವೆ ಸೇತುವೆ ಬಳಿ ತಾಯಿ ತನ್ನ ಮೂವರು ಮಕ್ಕಳೂಂದಿಗೆ ನದಿಗೆ ಹಾರಿದ್ದು, ಇದನ್ನು ಗಮನಿಸಿದ ನವೀನಹಾಗೂ ದಾದಪೀರ್ ಎಂಬ ಯುವಕರು ನದಿಗೆ ಹಾರಿ ತಾಯಿ ಹಾಗೂ … Continued

ಆನ್‌ಲೈನ್‌ನಲ್ಲಿ ವಿಷಕಾರಿ ʼದತ್ತೂರʼ ಮಾರಾಟ: ಅಮೆಜಾನ್‌, ಇನ್‌ಸ್ಟಾಮಾರ್ಟ್‌, ಬಿಗ್‌ಬಾಸ್ಕೆಟ್‌ ಆಹಾರ ಲೈಸನ್ಸ್‌ ಸಸ್ಪೆಂಡ್‌

ಬೆಂಗಳೂರು: ವಿಷಕಾರಿ ಸಸ್ಯವಾದ ಧತ್ತೂರ (Datura)ವನ್ನು ಆನ್‌ಲೈನ್‌ ಮೂಲಕ ಮಾರಾಟ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಅಮೆಜಾನ್‌,  ಇನ್‌ಸ್ಟಾಮಾರ್ಟ್‌ ಹಾಗೂ ಬಿಗ್‌ಬಾಸ್ಕೆಟ್‌ಗೆ ನೀಡಲಾಗಿದ್ದ ಆಹಾರ ಪರವಾನಗಿಗಳನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FSDA) ಅಮಾನತುಗೊಳಿಸಿದೆ. ಇಲಾಖೆಯಿಂದ ಮುಂದಿನ ಆದೇಶ ಹೊರಬೀಳುವವರೆಗೆ ಈ ಅಮಾನತು ಜಾರಿಯಲ್ಲಿರಲಿದೆ. ಇತ್ತೀಚೆಗೆ ಇಲಾಖೆ ನಡೆಸಿದ ಪರಿಶೀಲನೆಯಲ್ಲಿ ಧತ್ತೂರದ ಹಣ್ಣುಗಳು ಹಾಗೂ … Continued

ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ ; 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು : ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು, 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ದಕ್ಷಿಣ ಕನ್ನಡ, ಉಡುಪಿ ಹಾಗೂ … Continued