ಉಡುಪಿ: ದೇವಸ್ಥಾನದ ಕೆರೆಯಲ್ಲಿ ಮುಳುಗಿ ಬಾಲಕ ಸಾವು

ಉಡುಪಿ: ನಗರದ ತೆಂಕಪೇಟೆಯಲ್ಲಿರುವ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ವಿದ್ಯಾರ್ಥಿಯನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆ ನಿವಾಸಿ ಆದಿತ್ಯ ನಾಯಕ (15) ಎಂದು ಗುರುತಿಸಲಾಗಿದೆ. ದೇವಸ್ಥಾನದಲ್ಲಿ ನಡೆಯುತ್ತಿದ್ದ ಭಜನಾ ಕಾರ್ಯಕ್ರಮಕ್ಕೆ ಸಂಬಂಧಿಯೊಂದಿಗೆ ಆಗಮಿಸಿದ್ದ ಆದಿತ್ಯ, ಈ ವೇಳೆ ಕೆರೆಯಲ್ಲಿ ಕೆಲ ಭಕ್ತರು ಈಜುತ್ತಿದ್ದುದನ್ನು ಗಮನಿಸಿ ತಾನೂ ನೀರಿಗೆ ಇಳಿದಿದ್ದಾನೆ ಎನ್ನಲಾಗಿದೆ. ಕೆರೆಯ ಮಧ್ಯಭಾಗದತ್ತ ಈಜುತ್ತಿದ್ದಾಗ ಆಕಸ್ಮಿಕವಾಗಿ ನಿಯಂತ್ರಣ ಕಳೆದುಕೊಂಡ ಆದಿತ್ಯ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ ಎಂದು ಹೇಳಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣ ದೇವಸ್ಥಾನದ ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದಾರೆ.
ಅದರ ಬೆನ್ನಲ್ಲೇ ಮುಳುಗು ತಜ್ಞ ಈಶ್ವರ ಮಲ್ಪೆ ಅವರಿಗೆ ಮಾಹಿತಿ ನೀಡಲಾಗಿದ್ದು, ಅವರು ಸ್ಥಳಕ್ಕಾಗಮಿಸಿ ಕೆರೆಯಲ್ಲಿ ಶೋಧ ಕಾರ್ಯ ನಡೆಸಿದರು. ಬಳಿಕ ಆದಿತ್ಯನನ್ನು ನೀರಿನಿಂದ ಮೇಲಕ್ಕೆತ್ತಿ ತಕ್ಷಣ ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಪ್ರಯೋಜನವಾಗಲಿಲ್ಲ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಪ್ರಮುಖ ಸುದ್ದಿ :-   ಕರ್ನಾಟಕದ ಪಶ್ಚಿಮ ಘಟ್ಟದ ಮಂಜಿನ ಮಧ್ಯೆ ಕಿತ್ತಳೆ ಹಾವಿನಂತೆ ಸಾಗಿದ ʼವಂದೇ ಭಾರತʼ ರೈಲು ; ಅದ್ಭುತ ವಿಡಿಯೊಕ್ಕೆ ಭಾರೀ ಮೆಚ್ಚುಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement