ಬೆಂಗಳೂರು : ರಾಜ್ಯದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಒಳನಾಡಿನ ವಿವಿಧ ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ವಾತಾವರಣದಲ್ಲಿ ಗಮನಾರ್ಹ ಬದಲಾವಣೆಯಾಗಲಿದ್ದು, 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹಾಸನ, ಬೆಳಗಾವಿ, ಕಲಬುರಗಿ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗಲಿದೆ.
ಕರ್ನಾಟಕದ ಕರಾವಳಿ ತೀರದುದ್ದಕ್ಕೂ ಬಿರುಗಾಳಿಯ ಅಬ್ಬರ ಹೆಚ್ಚಿರಲಿದೆ. ಸುಮಾರು 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಕಟ್ಟುನಿಟ್ಟಿನ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚನೆ ಇದೆ. ಮಳೆ ಬಿಡುವಿನ ಆಗಸ್ಟ್ 26ರ ತನಕ ಇದೇ ವಾತಾವರಣ ಇರುವ ಸಾಧ್ಯತೆಗಳಿವೆ.


ನಿಮ್ಮ ಕಾಮೆಂಟ್ ಬರೆಯಿರಿ