ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆ ತಾಯಿಯೊಬ್ಬಳು ತನ್ನ ಮೂವರು ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ.
ಶಿವಮೊಗ್ಗದ ಅರಕೆರೆಯ ದೇವಾಲಯ ಪಕ್ಕದ ರೈಲ್ವೆ ಸೇತುವೆ ಬಳಿ ತಾಯಿ ತನ್ನ ಮೂವರು ಮಕ್ಕಳೂಂದಿಗೆ ನದಿಗೆ ಹಾರಿದ್ದು, ಇದನ್ನು ಗಮನಿಸಿದ ನವೀನಹಾಗೂ ದಾದಪೀರ್ ಎಂಬ ಯುವಕರು ನದಿಗೆ ಹಾರಿ ತಾಯಿ ಹಾಗೂ 11 ತಿಂಗಳ ಗಂಡು ಮಗುವನ್ನು ರಕ್ಷಿಸಿದ್ದಾರೆ. ಆದರೆ, 6 ಮತ್ತು 4 ವರ್ಷದ ಇಬ್ಬರು ಹೆಣ್ಣು ಮಕ್ಕಳು ನದಿಯಲ್ಲಿ ತೇಲಿ ಹೋಗಿದ್ದಾರೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಕೋಟೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಆಗಮಿಸಿ ಶೋಧ ನಡೆಸಲು ಮುಂದಾದರು. ನದಿಯಲ್ಲಿ ನೀರಿನ ಹರಿವು ಹೆಚ್ಚಾದ ಕಾರಣದಿಂದ ಶೋಧ ಕಾರ್ಯ ನಡೆಸಲು ಕಷ್ಟಸಾಧ್ಯವಾಗಿದೆ. ಮಂಗಳವಾರವೂ ಮುಂದುವರಿಯಲಿದೆ.
ಕೌಟಂಬಿಕ ಕಲಹದ ಹಿನ್ನೆಲೆ ಚಿತ್ರದುರ್ಗ ಮೂಲದ ಭವಾನಿ ಎಂಬ ಮಹಿಳೆ ತನ್ನ ಮೂರು ಮಕ್ಕಳೊಂದಿಗೆ ನದಿಗೆ ಹಾರಿದ್ದು, ತಾಯಿ ಹಾಗೂ ಒಂದು ಮಗುವನ್ನು ರಕ್ಷಿಸಲಾಗಿದೆ. ರಕ್ಷಣೆಗೆ ಒಳಗಾದ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.


ನಿಮ್ಮ ಕಾಮೆಂಟ್ ಬರೆಯಿರಿ