ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣಕ್ಕೆ ಬಂದಿದ್ದ ಹಿರಿಯ ನಾಗರಿಕರೊಬ್ಬರ ಮೃತದೇಹ ಬುಧವಾರ ಇಲ್ಲಿನ ಮುಖ್ಯ ಕಡಲತೀರಕ್ಕೆ ತೇಲಿಬಂದಿದೆ ಎಂದು ವರದಿಯಾಗಿದೆ.
ರಾಮತೀರ್ಥ ಭಾಗದ ಸಮುದ್ರದ ನೀರಿನಲ್ಲಿ ಬುಧವಾರ ಅಪರಿಚಿತ ವ್ಯಕ್ತಿಯ ದೇಹ ತೇಲುತ್ತಿರುವುದನ್ನು ಕಂಡ ಸ್ಥಳೀಯ ಮೀನುಗಾರರು ತಕ್ಷಣವೇ ಕಡಲತೀರದ ಜಾಗೃತ ಸಿಬ್ಬಂದಿಗೆ ಮಾಹಿತಿ ರವಾನಿಸಿದ್ದಾರೆ.. ಬೀಚ್ ಸೂಪರ್‌ವೈಸರ್ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಅಷ್ಟರಲ್ಲಿ ಸಮುದ್ರದ ತೆರೆಗಳಿಗೆ ಸಿಲುಕಿದ ಶವವು ಗೋಕರ್ಣದ ಮುಖ್ಯ ಬೀಚ್ ದಡದ ಸಮೀಪ ಬಂದಿದೆ.
ತಕ್ಷಣವೇ ಕಾರ್ಯಪ್ರವೃತ್ತರಾದ ಲೈಫ್‌ಗಾರ್ಡ್ ಸಿಬ್ಬಂದಿ ಹಗ್ಗದ ಮೂಲಕ ಮೃತದೇಹವನ್ನು ದಡಕ್ಕೆ ಎಳೆದು ತಂದು ಆಂಬುಲೆನ್ಸ್‌ಗೆ ರವಾನಿಸಿದರು. ಸ್ಥಳಕ್ಕೆ ಗೋಕರ್ಣ ಠಾಣಾ ಪೊಲೀಸರು ಹಾಗೂ ಕರಾವಳಿ ಕಾವಲು ಪಡೆಯ ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆಸಿದ್ದಾರೆ. ಮೃತರನ್ನು ಬೆಂಗಳೂರು ಉತ್ತರದ ದಾಸರಹಳ್ಳಿ ನಿವಾಸಿ ಜೆ.ಎಸ್. ವೆಂಕಟೇಶ (68) ಎಂದು ಗುರುತಿಸಲಾಗಿದೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಗೋಕರ್ಣ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ


ನಿಮ್ಮ ಕಾಮೆಂಟ್ ಬರೆಯಿರಿ