ಮಂಗಳೂರು : ಭಜನೆ ಮಾಡುತ್ತಿದ್ದಾಗ ಕುಸಿದುಬಿದ್ದು ಯುವಕ ಸಾವು

ಮಂಗಳೂರು : ತೋಕೂರು ಸುಬ್ರಮಣ್ಯ ದೇವಸ್ಥಾನದ ಆವರಣದಲ್ಲಿ ಅಷ್ಟಮಿ ಪ್ರಯುಕ್ತ  ನಡೆಯುತ್ತಿದ್ದ ಭಜನೆ ಕಾರ್ಯಕ್ರಮದ ವೇಳೆ ಭಜನೆ ಮಾಡುತ್ತಿದ್ದ ಯುವಕನೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ (ಸೆ. 4) ನಡೆದಿದೆ ಎಂದು ವರದಿಯಾಗಿದೆ.
ಮೃತ ವ್ಯಕ್ತಿಯನ್ನು ತೋಕೂರು ನಿವಾಸಿ ಶ್ರೀನಾಥ ಶೆಟ್ಟಿಗಾರ (38) ಎಂದು ಗುರುತಿಸಲಾಗಿದ್ದು, ಭಜನೆ ಮಾಡುತ್ತಿದ್ದಾಗ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ ಎಂದು ಹೇಳಲಾಗಿದೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪ್ರಯೋಜನವಾಗಿಲ್ಲ. ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀನಾಥ ಶೆಟ್ಟಿಗಾರ ಅವರು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು, ಅಷ್ಟಮಿ ಪ್ರಯುಕ್ತ ಊರಿಗೆ ಆಗಮಿಸಿದ್ದರು. ಸ್ಥಳೀಯ ಸಂಘಟನೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು ಎನ್ನಲಾಗಿದೆ. ಈ ಘಟನೆ ಸ್ಥಳೀಯರಲ್ಲಿ ಹಾಗೂ ಕುಟುಂಬಸ್ಥರಲ್ಲಿ ತೀವ್ರ ಆಘಾತ ಮತ್ತು ದುಃಖಕ್ಕೆ ಕಾರಣವಾಗಿದೆ.

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಬೆಂಗಳೂರು: ಸಾಲದ ಕಂತಿನ ಹಣ ಕೊಡದ್ದಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ; ಮೂವರ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement