ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರದ ಶ್ರೀ ಹನುಮಂತ ದೇವಸ್ಥಾನದಲ್ಲಿ ಸೆಪ್ಟೆಂಬರ್ 12ರಂದು ರಾಮತಾರಕ ಮಂತ್ರ ಪಠಣ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಸೆಪ್ಟೆಂಬರ್ 12ರಂದು ಬೆಳಿಗ್ಗೆ 8:30ರಿಂದ 9:30ರವರೆಗೆ ಸಾಮೂಹಿಕ ರಾಮತಾರಕ ಮಂತ್ರ ಪಠಣ ನಡೆಯಲಿದ್ದು, ಬಳಿಕ ಬೆಳಿಗ್ಗೆ 9:30ಕ್ಕೆ ಸಂಕಲ್ಪ ಹಾಗೂ ಯಜ್ಞ ಆರಂಭವಾಗಲಿದೆ. ಮಧ್ಯಾಹ್ನ 12:30ಕ್ಕೆ ಪೂರ್ಣಾಹುತಿ ನೆರವೇರಲಿದ್ದು, ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ.
ಅನಂತರ ಮಧ್ಯಾಹ್ನ 1:30ರಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕು ಎಂದು ದೇವಸ್ಥಾನದ ಮೊಕ್ತೆಸರ ಮಂಡಳಿ ತಿಳಿಸಿದೆ.


ನಿಮ್ಮ ಕಾಮೆಂಟ್ ಬರೆಯಿರಿ