ಎಲ್ಲರಿಗೂ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು

ಸೆ.12ರಂದು ಚಂದಾವರ ಹನುಮಂತ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಪಠಣ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಚಂದಾವರದ ಶ್ರೀ ಹನುಮಂತ ದೇವಸ್ಥಾನದಲ್ಲಿ ಸೆಪ್ಟೆಂಬರ್ 12ರಂದು ರಾಮತಾರಕ ಮಂತ್ರ ಪಠಣ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಸೆಪ್ಟೆಂಬರ್ 12ರಂದು ಬೆಳಿಗ್ಗೆ 8:30ರಿಂದ 9:30ರವರೆಗೆ ಸಾಮೂಹಿಕ ರಾಮತಾರಕ ಮಂತ್ರ ಪಠಣ ನಡೆಯಲಿದ್ದು, ಬಳಿಕ ಬೆಳಿಗ್ಗೆ 9:30ಕ್ಕೆ ಸಂಕಲ್ಪ ಹಾಗೂ ಯಜ್ಞ ಆರಂಭವಾಗಲಿದೆ. ಮಧ್ಯಾಹ್ನ 12:30ಕ್ಕೆ ಪೂರ್ಣಾಹುತಿ ನೆರವೇರಲಿದ್ದು, ಮಧ್ಯಾಹ್ನ 1 ಗಂಟೆಗೆ ಮಹಾಮಂಗಳಾರತಿ ನಡೆಯಲಿದೆ.
ಅನಂತರ ಮಧ್ಯಾಹ್ನ 1:30ರಿಂದ ಅನ್ನಸಂತರ್ಪಣೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಬೇಕು ಎಂದು ದೇವಸ್ಥಾನದ ಮೊಕ್ತೆಸರ ಮಂಡಳಿ ತಿಳಿಸಿದೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಸಿದ್ದರಾಮಯ್ಯ ನಕಲಿ ಸ್ಟಿಂಗ್‌ ವಿಡಿಯೊ ಪ್ರಕರಣ: ಸಿಸಿಬಿ ತನಿಖೆಯ ನಂಟು ಕುಮಾರಸ್ವಾಮಿ ದೆಹಲಿ ನಿವಾಸದತ್ತ ಬೊಟ್ಟು

ನಿಮ್ಮ ಕಾಮೆಂಟ್ ಬರೆಯಿರಿ

advertisement