ವಿಜಯನಗರ: ಗಣೇಶ ಮೂರ್ತಿ ಕೊಂಡೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ಇಬ್ಬರು ಗಾಯಗೊಂಡ ಘಟನೆ ಹೊಸಪೇಟೆ ನಗರದ ಅನಂತಶಯನಗುಡಿ ಹೊರವಲಯದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ.
ಕಮಲಾಪುರ ಮೂಲದ ಹುಲುಗಪ್ಪ ಮತ್ತು ದೀಪಕ ಎಂಬವರು ಗಾಯಗೊಂಡಿದಿದ್ದಾರೆ ಎಂದು ವರದಿಯಗಿದ್ದು, ಗಣೇಶ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಸಾಗಿಸುತ್ತಿದ್ದಾಗ ಮೂರ್ತಿಗೆ ಅಳವಡಿಸಿದ್ದ ಬಿದಿರು ವಿದ್ಯುತ್ ಕಂಬದ ತಂತಿಗೆ ತಗುಲಿದೆ. ಪರಿಣಾಮ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಟ್ರ್ಯಾಕ್ಟರ್ ಹಾಗೂ ಗಣೇಶ ಮೂರ್ತಿ ಕಾಲುವೆಗೆ ಉರುಳಿವೆ.
ವಿದ್ಯುತ್ ಶಾಕ್ ನಿಂದ ಗಾಯಗೊಂಡ ಹುಲುಗಪ್ಪ ಮತ್ತು ದೀಪಕ ಅವರನ್ನು ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ಬಿಮ್ಸ್‌ಗೆ ಒಯ್ಯಲಾಗಿದೆ ಎಂದು ತಿಳಿದುಬಂದಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಹೊಸಪೇಟೆ ಡಿವೈಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ