ಬೆಳಗಾವಿ : ಜಿಲ್ಲೆಯ ಸವದತ್ತಿ ನಗರದ ಹೊರವಲಯದ ಧಾರವಾಡ ರಸ್ತೆಯಲ್ಲಿ ಸೋಮವಾರ ರಾತ್ರಿ ದ್ವಿಚಕ್ರ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಮೃತರಲ್ಲಿ ಇಬ್ಬರನ್ನು ವಿನಯ ಜೋಗೆನ್ನವರ ಹಾಗೂ ಆಕಾಶ ಜಾಧವ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.
ಸಾರಿಗೆ ಬಸ್ ಬಸವಕಲ್ಯಾಣದಿಂದ ಹುಬ್ಬಳ್ಳಿ ಕಡೆಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನ ಬಸ್ಸಿಗೆ ಡಿಕ್ಕಿ ಹೊಡೆದು ಬಸ್ ಕೆಳಗೆ ಹೊಕ್ಕಿದೆ. ಇದರಿಂದಾಗಿ ತೀವ್ರವಾಗಿ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ