ಬೆಳಗಾವಿ : ಬೆಳಗಾವಿಯಲ್ಲಿ ಸೋಮವಾರ ತಡರಾತ್ರಿ ಶಂಕಿತ ಫ್ರಿಜ್ ಸ್ಫೋಟದಿಂದ ಮನೆಗೆ ಬೆಂಕಿ ಹತ್ತಿಕೊಂಡು ಸಂಭವಿಸಿದ ಅವಘಡದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಿಸದೆ ಬುಧವಾರ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಜಾನನ ರಾಜಾರಾಮ ಧಮೋನೆ (65)ಮತ್ತು ಅವರ ಮಗ ರೋಷನ್ (21) ಮೃತಪಟ್ಟವರು. ಈ ಘಟನೆಯಲ್ಲಿ ಸಾವಿನ ಸಂಖ್ಯೆ ಈಗ ಆರಕ್ಕೆ ಏರಿದೆ. ಗ ಸೋಮವಾರ ರಾತ್ರಿ ಸಂಭವಿಸಿದ ದುರ್ಘಟನೆಯಲ್ಲಿ ಮನೆಯಲ್ಲಿ ಹೊತ್ತಿಕೊಂಡ ಬೆಂಕಿಯಿಂದ ಒಂದೇ ಕುಟುಂಬದ ನಾಲ್ವರು ಮಹಿಳೆಯರು ಮೃತಪಟ್ಟಿಟ್ಟದರು. ತೀವ್ರವಾಗಿ ಗಾಯಗೊಂಡಿದ್ದ ಗಜಾನನ ಹಾಗೂ ರೋಷನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ತಂದೆ ಮತ್ತು ಮಗ ಸಹ ಬುಧವಾರ ಮೃತಪಟ್ಟಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ