ರಾಯಚೂರು: ಮಹಿಳೆಯೊಬ್ಬರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿ, ಆಕೆಯ ಎರಡು ವರ್ಷದ ಮಗುವನ್ನು ಮೃತದೇಹದ ಮೇಲೆಯೇ ಕಳ್ಳಿರಿಸಿ ಹಂತಕರು ಪರಾರಿಯಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಶನಿವಾರ (ಸೆ.19) ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ.
ಕೊಲೆಯಾದ ಮಹಿಳೆಯನ್ನು ಸಿಂಧನೂರಿನ ಆರ್ಎಚ್. ಕ್ಯಾಂಪ್-4ರ ನಿವಾಸಿ ಸ್ನೇಹಾ (26) ಎಂದು ಗುರುತಿಸಲಾಗಿದೆ. ಸಿಂಧನೂರು ತಾಲೂಕಿನ ಆರ್ಎಚ್. ಕ್ಯಾಂಪ್-5ರ ಗ್ರಾಮದ ಹೊರವಲಯದಲ್ಲಿರುವ ಜಮೀನೊಂದರಲ್ಲಿ ಆಕೆಯ ಶವ ಪತ್ತೆಯಾಗಿದೆ.
ಹಂತಕರು ಸ್ನೇಹಾ ಅವರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿದ ಬಳಿಕ, ಅವರ ಎರಡು ವರ್ಷದ ಮಗುವನ್ನು ಮೃತದೇಹದ ಮೇಲೆಯೇ ಕೂರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ನಿರ್ಜನ ಪ್ರದೇಶದಲ್ಲಿ ಮಗು ಅಳುತ್ತಿದ್ದ ಶಬ್ದ ಕೇಳಿದ ನಂತರ ಸ್ಥಳೀಯರು ಸ್ಥಳಕ್ಕೆ ತೆರಳಿ ನೋಡಿದಾಗ ತಾಯಿಯ ಮೃತದೇಹದ ಮೇಲೆ ಕುಳಿತಿರುವುದು ಕಂಡುಬಂದಿದೆ.
ಮಾಹಿತಿ ತಿಳಿದು ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹಂತಕರ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ