ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ರಾಜ್ಯದಲ್ಲಿ ಪಂಚಾಯತ ಚುನಾವಣೆ ನಡೆಸುವ ಬಗ್ಗೆಯೂ ನಿರ್ದಾರ ಕೈಗೊಳ್ಳಲಾಗಿದೆ.
2026 ರ ಡಿಸೆಂಬರ್ ಒಳಗೆ ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಹಾಗೂ ಜಿಲ್ಲಾ ಪಂಚಾಯತಗಳಿಗೆ ಚುನಾವಣೆ ನಡೆಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ ಅವರು, ರಾಜ್ಯದಲ್ಲಿ ಪಂಚಾಯತ್ ರಾಜ್ ಸಂಸ್ಥೆಗಳ ಅವಧಿ ಪೂರ್ಣಗೊಂಡಿದ್ದು, ಡಿಸೆಂಬರ್ ಒಳಗೆ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ. ಚುನಾವಣೆ ನಡೆಸಲು ಇವಿಎಂ (EVM) ಬದಲಿಗೆ ಮತಪೆಟ್ಟಿಗೆ ಬಳಕೆಗೆ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ.
ಚುನಾವಣೆ ನಡೆಸಲು ಅಗತ್ಯ ಮತಪೆಟ್ಟಿಗೆ ಖರೀದಿ ಮತ್ತು ಲೈವ್ ವೆಬ್ ಕಾಸ್ಟಿಂಗ್ (Live webcasting) ಮಾಡಲು 151.31 ಕೋಟಿ ರೂ. ವೆಚ್ಚಕ್ಕೆ ಸಚಿವ ಸಂಪುಟದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.


ನಿಮ್ಮ ಕಾಮೆಂಟ್ ಬರೆಯಿರಿ