ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಬರ ಪರಿಸ್ಥಿತಿಯನ್ನು ಸರ್ಕಾರ ನಿರಂತರವಾಗಿ ಮೌಲ್ಯಮಾಪನ ಮಾಡುತ್ತಿದ್ದು, ದೀಗ ಮೂರನೇ ಹಂತದಲ್ಲಿ ಮತ್ತಷ್ಟು 53 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿರುವ ಅವರು, ಮೊದಲ ಹಂತದಲ್ಲಿ 101 ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿತ್ತು. ಇದೀಗ ಮೂರನೇ ಹಂತದಲ್ಲಿ 53 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ. ಹೊಸದಾಗಿ ಘೋಷಿಸಲಾದ 53 ತಾಲೂಕುಗಳಲ್ಲಿ 51 ತಾಲೂಕುಗಳು ತೀವ್ರ ಬರಪೀಡಿತ ಹಾಗೂ 2 ತಾಲೂಕುಗಳು ಸಾಧಾರಣ ಬರಪೀಡಿತ ಎಂದು ವರ್ಗೀಕರಿಸಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳ ಒಟ್ಟು ಸಂಖ್ಯೆ 177ಕ್ಕೆ ಏರಿಕೆಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅಲ್ಲದೆ, ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆಗಳ ಸ್ಥಿತಿ ಸೇರಿದಂತೆ ವಿವಿಧ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ ನಾಲ್ಕನೇ ಹಂತದಲ್ಲಿ 7 ಜಿಲ್ಲೆಗಳ 11 ತಾಲೂಕುಗಳು ‘ಸ್ಟೆಪ್-3 ಗ್ರೌಂಡ್ ಟ್ರೂಥಿಂಗ್’ಗೆ ಅರ್ಹತೆ ಪಡೆದಿವೆ. ವೈಜ್ಞಾನಿಕ ಪರಿಶೀಲನೆ, ಪಾರದರ್ಶಕ ಸಮೀಕ್ಷೆ ಹಾಗೂ ನಿಖರ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮುಂಗಾರು ಹಂಗಾಮು ಮುಕ್ತಾಯಗೊಳ್ಳುವವರೆಗೆ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದೆ. ಅಗತ್ಯ ಕಂಡುಬಂದಲ್ಲಿ ಮುಂದಿನ ಹಂತಗಳಲ್ಲಿಯೂ ಹೆಚ್ಚುವರಿ ತಾಲೂಕುಗಳನ್ನು ಗ್ರೌಂಡ್ ಟ್ರೂಥಿಂಗ್ ಪ್ರಕ್ರಿಯೆಗೆ ಸೇರಿಸಲಾಗುತ್ತದೆ.ಬೆಳೆ ಹಾನಿಯ ನೈಜ ಚಿತ್ರಣದ ಆಧಾರದ ಮೇಲೆ ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನಿಯಮಾನುಸಾರ ಅಗತ್ಯ ನೆರವು ನೀಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಹೊಸದಾಗಿ ಬರಪೀಡಿತ ಎಂದು ಘೋಷಿಸಲಾದ 53 ತಾಲೂಕುಗಳು
ಬಾಗಲಕೋಟೆ ಜಿಲ್ಲೆ : ಬಾದಾಮಿ, ಹುನಗುಂದ, ಮುಧೋಳ, ರಬಕವಿ-ಬನಹಟ್ಟಿ ಹಾಗೂ ತೆರದಾಳ
ಬಳ್ಳಾರಿ ಜಿಲ್ಲೆ: ಸಿರುಗುಪ್ಪ ತಾಲೂಕು
ಬೆಳಗಾವಿ ಜಿಲ್ಲೆ : ಅಥಣಿ, ಬೈಲಹೊಂಗಲ, ಬೆಳಗಾವಿ, ಚಿಕ್ಕೋಡಿ, ಕಿತ್ತೂರು, ಮೂಡಲಗಿ, ನಿಪ್ಪಾಣಿ, ರಾಯಭಾಗ ಮತ್ತು ಯರಗಟ್ಟಿ ತಾಲೂಕುಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ : ದೊಡ್ಡಬಳ್ಳಾಪುರ ತಾಲೂಕು
ಬೆಂಗಳೂರು ನಗರ ಜಿಲ್ಲೆ : ಬೆಂಗಳೂರು ದಕ್ಷಿಣ ತಾಲೂಕು
ಬೀದರ ಜಿಲ್ಲೆ : ಹುಲಸೂರು ಮತ್ತು ಕಮಲನಗರ ತಾಲೂಕುಗಳು
ಚಿತ್ರದುರ್ಗ ಜಿಲ್ಲೆ : ಚಿತ್ರದುರ್ಗ, ಹೊಳಲ್ಕೆರೆ ಹಾಗೂ ಮೊಳಕಾಲ್ಮುರು ತಾಲೂಕುಗಳು
ದಾವಣಗೆರೆ ಜಿಲ್ಲೆ: ಹರಿಹರ ತಾಲೂಕು
ಗದಗ ಜಿಲ್ಲೆ : ಲಕ್ಷ್ಮೇಶ್ವರ, ನರಗುಂದ ಮತ್ತು ಶಿರಹಟ್ಟಿ
ಹಾಸನ ಜಿಲ್ಲೆ :ಆಲೂರು ಹಾಗೂ ಬೇಲೂರು ತಾಲೂಕುಗಳು
ಹಾವೇರಿ ಜಿಲ್ಲೆ : ಬ್ಯಾಡಗಿ, ಹಾನಗಲ್, ಹಾವೇರಿ, ರಾಣೆಬೆನ್ನೂರು, ಸವಣೂರು ಮತ್ತು ಶಿಗ್ಗಾಂವಿ ತಾಲೂಕುಗಳು
ಕಲಬುರಗಿ ಜಿಲ್ಲೆ : ಚಿಂಚೋಳಿ, ಜೇವರ್ಗಿ, ಕಾಳಗಿ, ಕಮಲಾಪುರ ಹಾಗೂ ಸೇಡಂ ತಾಲೂಕುಗಳು
ಕೊಪ್ಪಳ ಜಿಲ್ಲೆ : ಕೊಪ್ಪಳ ಮತ್ತು ಯಲಬುರ್ಗಾ ತಾಲೂಕುಗಳು
ವಿಜಯನಗರ ಜಿಲ್ಲೆ : ಕೊಟ್ಟೂರು ಹಾಗೂ ಕೂಡ್ಲಿಗಿ ತಾಲೂಕುಗಳು
ವಿಜಯಪುರ ಜಿಲ್ಲೆ : ಆಲಮೇಲ, ದೇವರ ಹಿಪ್ಪರಗಿ, ಮುದ್ದೇಬಿಹಾಳ ಹಾಗೂ ಸಿಂದಗಿ ತಾಲೂಕುಗಳು
ಯಾದಗಿರಿ ಜಿಲ್ಲೆ : ಗುರುಮಿಟ್ಕಲ್, ಹುಣಸಗಿ, ಸುರಪುರ, ವಡಗೇರಾ ಹಾಗೂ ಯಾದಗಿರಿ ತಾಲೂಕುಗಳು
ಉಡುಪಿ ಜಿಲ್ಲೆ : ಬ್ರಹ್ಮಾವರ ತಾಲೂಕು
ಒಟ್ಟಾರೆ 17 ಜಿಲ್ಲೆಗಳ 53 ತಾಲೂಕುಗಳನ್ನು ಹೊಸದಾಗಿ ಬರಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರ ಘೋಷಿಸಿದೆ. ಈ ಘೋಷಣೆಯೊಂದಿಗೆ ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ.
ಬಾಗಲಕೋಟೆ ಜಿಲ್ಲೆ : ಬಾದಾಮಿ, ಹುನಗುಂದ, ಮುಧೋಳ, ರಬಕವಿ-ಬನಹಟ್ಟಿ ಹಾಗೂ ತೆರದಾಳಬಳ್ಳಾರಿ ಜಿಲ್ಲೆ: ಸಿರುಗುಪ್ಪ ತಾಲೂಕು

ರಾಜ್ಯದ ಜನರ ಕುಡಿಯುವ ನೀರಿನ ಅಗತ್ಯ ಪೂರೈಸುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಬರ ಪರಿಸ್ಥಿತಿಯ ನಡುವೆಯೂ ರಾಜ್ಯದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಉದ್ದೇಶಕ್ಕಾಗಿ ಏಪ್ರಿಲ್–ಮೇ ಅವಧಿಯಲ್ಲಿ ಜಿಲ್ಲೆಗಳಿಗೆ ₹117 ಕೋಟಿ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ವ್ಯವಸ್ಥೆಗಾಗಿ ₹189 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಒಟ್ಟಾರೆ ₹306 ಕೋಟಿ ಅನುದಾನವನ್ನು ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಮ್ಮ ಕಾಮೆಂಟ್ ಬರೆಯಿರಿ