ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ; ಮುನ್ಸೂಚನೆ

ಬೆಂಗಳೂರು : ಕರ್ನಾಟಕದ  ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರಂದು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕದಲ್ಲಿ ಸೆ.24ರಂದು ಭಾರಿ ಮಳೆಯ ಸಾಧ್ಯತೆ ಇದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ. ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಸೆ.24ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಾಗಲಕೋಟೆ, ವಿಜಯಪುರ, ಬೀದರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗಲಿದೆ.
ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಮನ್ಸೂಚನೆ ನೀಡಲಾಗಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement