ಮೈಸೂರು: ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಮಗುವಿನ ಮೇಲೆ ಶಾಲಾ ಬಸ್ ಹರಿದು ಮಗು ಮೃತಪಟ್ಟ ದಾರುಣ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಶಾಲಾ ವಾಹನದಲ್ಲಿತನ್ನ ೪ ವರ್ಷದ ಮಗನನ್ನು ಖಾಸಗಿ ವಿದ್ಯಾ ಸಂಸ್ಥೆಯ ಶಾಲಾ ವಾಹನದಿಂದ ಕೆಳಗಿಳಿಸಲು ತಾಯಿ ಹೋಗಿದ್ದಾಗ ಈ ದುರಂತ ಸಂಭವಿಸಿದೆ. ತಾಯಿ ಮಗನನ್ನು ಇಳಿಸುತ್ತಿದ್ದ ಸಮಯದಲ್ಲಿ, ಚಾಲಕನು ವಾಹನವನ್ನು ಮುಂದಕ್ಕೆ ಚಲಾಯಿಸಿದ್ದರಿಂದ ಹತ್ತಿರದಲ್ಲೇ ನಿಂತಿದ್ದ ಲತೀಕ್ಷಾಳಿಗೆ ಶಾಲಾ ವಾಹನ ಡಿಕ್ಕಿ ಹೊಡೆದು ಮಗು ಸ್ಥಳದಲ್ಲೇ ಮೃತಪಟ್ಟಿದೆ.
ಬಾಲಕನ ತಾಯಿ ಆತನನ್ನು ವಾಹನದಿಂದ ಕೆಳಗಿಳಿಸುತ್ತಿದ್ದ ವೇಳೆ, ಬಸ್ ರಿವರ್ಸ್ ತೆಗೆಯುವಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ವಾಹನದ ಚಕ್ರ ಬಾಲಕಿಯ ಮೇಲೆ ಹರಿದ ಪರಿಣಾಮ, ಗಂಭೀರವಾಗಿ ಗಾಯಗೊಂಡ ಲತಿಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ.
ಘಟನೆಗೆ ಸಂಬಂಧಿಸಿದಂತೆ 42 ವರ್ಷದ ಚಾಲಕ ಸಿದ್ದರಾಜು ವಿರುದ್ಧ ದೂರು ದಾಖಲಾಗಿದೆ. ಚಾಲಕನ ಅಜಾಗರೂಕ ಹಾಗೂ ನಿರ್ಲಕ್ಷ್ಯದ ಚಾಲನೆಯಿಂದಲೇ ಅಪಘಾತ ಸಂಭವಿಸಿದೆ ಎಂದು ಬಾಲಕಿಯ ಕುಟುಂಬದವರು ಆರೋಪಿಸಿದ್ದಾರೆ. ಚಾಲಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರು ಒತ್ತಾಯಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ