ಪರೀಕ್ಷೆಯಲ್ಲಿ ಉತ್ತರ ಪಡೆಯಲು ಚಾಟ್‌ಜಿಪಿಟಿ ಬಳಕೆ: ಪ್ರಾಧ್ಯಾಪಕರಿಗೆ ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ಮುಂಬೈ: ಪರೀಕ್ಷೆಯ ವೇಳೆ ಮೊಬೈಲ್‌ ಫೋನ್‌ ಬಳಸಿ ಚಾಟ್‌ಜಿಪಿಟಿ (ChatGPT) ಮೂಲಕ ಉತ್ತರಗಳನ್ನು ಪಡೆಯಲು ಯತ್ನಿಸಿದ ಆರೋಪಕ್ಕೆ ಒಳಗಾಗಿದ್ದ ಭಾರತೀಯ ತಾಂತ್ರಿಕ ಸಂಸ್ಥೆ (ಐಐಟಿ) ಬಾಂಬೆಯ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬರು ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದ ಏಳು ತಿಂಗಳ ಅವಧಿಯಲ್ಲಿ ಐಐಟಿ ಪವಾಯಿ ಕ್ಯಾಂಪಸ್‌ನಲ್ಲಿ ವರದಿಯಾದ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. … Continued

ಪಂಚಾಯತ ಚುನಾವಣೆ ನಡೆಸಲು ಸಚಿವ ಸಂಪುಟ ತೀರ್ಮಾನ : ಇವಿಎಂ ಬದಲಿಗೆ ಬ್ಯಾಲೆಟ್‌ ಬಾಕ್ಸ್‌ ಬಳಕೆ

ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ರಾಜ್ಯದಲ್ಲಿ ಪಂಚಾಯತ ಚುನಾವಣೆ ನಡೆಸುವ ಬಗ್ಗೆಯೂ ನಿರ್ದಾರ ಕೈಗೊಳ್ಳಲಾಗಿದೆ. 2026 ರ ಡಿಸೆಂಬರ್ ಒಳಗೆ ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಹಾಗೂ ಜಿಲ್ಲಾ ಪಂಚಾಯತಗಳಿಗೆ ಚುನಾವಣೆ ನಡೆಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ … Continued

ರಾಜ್ಯದ ಕರಾವಳಿ ಭಾಗಕ್ಕೆ 32,611 ಕೋಟಿ ರೂ. ಯೋಜನೆಗಳು ; ಸಚಿವ ಸಂಪುಟ ಸಭೆ ಅನುಮೋದನೆ

ಮಂಗಳೂರು : ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ  ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ (Cabinet Meeting) … Continued

ಪರಮಾಣು ಸ್ಫೋಟದ ಪರೀಕ್ಷೆಗಳ ಬಳಿಕ ಉತ್ತರ ಕೊರಿಯಾದಲ್ಲಿ 1399 ಭೂಕಂಪಗಳು ; ಅಧ್ಯಯನದಲ್ಲಿ ಶಾಕಿಂಗ್‌ ಮಾಹಿತಿ

ಉತ್ತರ ಕೊರಿಯಾದ ಪ್ರಮುಖ ಅಣುಪರೀಕ್ಷಾ ಕೇಂದ್ರವಾಗಿರುವ ಮೌಂಟ್ ಮಂಟಾಪ್‌ (Mount Mantap) ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಭೂಕಂಪಗಳ ಸಂಖ್ಯೆ ಹೆಚ್ಚುತ್ತಿರುವುದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ. 2017ರಲ್ಲಿ ಉತ್ತರ ಕೊರಿಯಾ ನಡೆಸಿದ ಅತಿದೊಡ್ಡ ನೆಲದೊಳಗಿನ ಅಣುಪರೀಕ್ಷೆಯೇ ಇದಕ್ಕೆ ಕಾರಣವಾಗಿರಬಹುದು ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಅಧ್ಯಯನದ ಪ್ರಕಾರ, ಮೌಂಟ್ ಮಂಟಾಪ್‌ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ … Continued

ಪಾಕಿಸ್ತಾನದ ಮಸೀದಿಯಲ್ಲಿ ಭೀಕರ ಬಾಂಬ್ ಸ್ಫೋಟ : 31 ಮಂದಿ ಸಾವು, 78 ಮಂದಿಗೆ ಗಾಯ; ಮೃತರಲ್ಲಿ 16 ಪೊಲೀಸ್ ಸಿಬ್ಬಂದಿ

ಇಸ್ಲಾಮಾಬಾದ್: ಇಸ್ಲಾಮಾಬಾದ್‌ : ಉತ್ತರ ಪಾಕಿಸ್ತಾನದ ಪೊಲೀಸ್ ಪ್ರಧಾನ ಕಚೇರಿ ಬಳಿಯ ಮಸೀದಿಯಲ್ಲಿ ನಡೆದ ಆತ್ಮಹತ್ಯಾ ಬಾಂಬ್ ದಾಳಿ ಸ್ಫೋಟ ಮತ್ತು ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 31 ಕ್ಕೆ ಏರಿದೆ; ಇದರಲ್ಲಿ 16 ಮಂದಿ ಪೊಲೀಸ್ ಸಿಬ್ಬಂದಿ ಸೇರಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಈ ಘಟನೆಯಲ್ಲಿ 50ಕ್ಕೂ ಹೆಚ್ಚು … Continued

ಲಂಡನ್-ಬಾಂಗ್ಲಾದೇಶ ವಿಮಾನ ಹಾರಾಟದಲ್ಲಿದ್ದಾಗಲೇ ಪ್ರಯಾಣಿಕರಿಬ್ಬರ ಮಧ್ಯೆ ಮಾರಾಮಾರಿ : ವಿಡಿಯೊ ವೈರಲ್

ಲಂಡನ್‌ನಿಂದ ಬಾಂಗ್ಲಾದೇಶಕ್ಕೆ ತೆರಳುತ್ತಿದ್ದ ಬಿಮಾನ್ ಬಾಂಗ್ಲಾದೇಶ ಏರ್‌ಲೈನ್ಸ್‌ ವಿಮಾನದಲ್ಲಿ ಇಬ್ಬರು ಪ್ರಯಾಣಿಕರ ನಡುವೆ ನಡೆದ ಮಾರಾಮಾರಿಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ವಿಮಾನವು ಆಗಸದಲ್ಲಿ ಹಾರಾಟ ನಡೆಸುತ್ತಿದ್ದಾಗ ನಡೆದಿದ್ದು, ಜಗಳಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ವೈರಲ್ ಆಗಿರುವ ವಿಡಿಯೊದಲ್ಲಿ ಇಬ್ಬರು ಪ್ರಯಾಣಿಕರು ಮೊದಲು ತೀವ್ರ ವಾಗ್ವಾದದಲ್ಲಿ ತೊಡಗಿರುವುದು … Continued

ಶಿರಸಿ : ಸೆ.19ರಂದು ಸಪ್ತಕ ಜಿ.ಎಸ್‌. ಹೆಗಡೆ ದಂಪತಿಗೆ ಸನ್ಮಾನ, ಸಂಗೀತ ಕಾರ್ಯಕ್ರಮ

ಶಿರಸಿ: ಸಪ್ತಕ ಬೆಂಗಳೂರು ಸಂಸ್ಥಾಪಕ ಜಿ.ಎಸ್‌. ಹೆಗಡೆ (G.S. Hegde) ಹಾಗೂ ಗೀತಾ ಹೆಗಡೆ ದಂಪತಿಯ ಸಾಂಸ್ಕೃತಿಕ ಮತ್ತು ಸಾಮಾಜಿಕ ಸೇವೆಯನ್ನು ಗೌರವಿಸುವ ಉದ್ದೇಶದಿಂದ ಸೆಪ್ಟಂಬರ್‌ 19ರಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ರಂಗಧಾಮದಲ್ಲಿ ಸನ್ಮಾನ ಹಾಗೂ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿ.ಎಸ್‌. ಹೆಗಡೆ ಅವರ 75ನೇ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ನಡೆಯಲಿರುವ ಸಪ್ತಕ … Continued

ನಂದಿಗ್ರಾಮ ಉಪಸಮರ : ಮಮತಾಗೆ ಶಾಕ್‌ ಮೇಲೆ ಶಾಕ್‌; ಚಿಹ್ನೆ ಬದಲು, ಕೈಕೊಟ್ಟ ಅಭ್ಯರ್ಥಿ ; ಕಾಂಗ್ರೆಸ್ಸಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ಕೈ ಅಭ್ಯರ್ಥಿ ಬಂಧನ !

ಕೋಲ್ಕತ್ತಾ: ಅಕ್ಟೋಬರ್ 6 ರಂದು ನಡೆಯಲಿರುವ ನಂದಿಗ್ರಾಮ ವಿಧಾನಸಭಾ ಉಪಚುನಾವಣೆಯು ಅಚ್ಚರಿಯ ರಾಜಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದೆ. ಟಿಎಂಸಿ ಅಭ್ಯರ್ಥಿ ಸಂಚಿತಾ ಪ್ರಧಾನ ಡೇ ನಾಮಪತ್ರ ವಾಪಸಾತಿ, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಕಾಂಗ್ರೆಸ್‌ಗೆ ದಿಢೀರ್ ಬೆಂಬಲ ಘೋಷಣೆ, ಹಾಗೂ ಕೆಲವೇ ಗಂಟೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಕೊಲೆ ಪ್ರಕರಣದಲ್ಲಿ ಬಂಧನ—ಈ … Continued

ತುಳು ಕರ್ನಾಟಕದ 2ನೇ ಹೆಚ್ಚುವರಿ ಆಡಳಿತ ಭಾಷೆ ; ಸಿಎಂ ಶಿವಕುಮಾರ ಘೋಷಣೆ

ಮಂಗಳೂರು : ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತುಳು ಭಾಷೆಗೆ ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಲು ಸರ್ಕಾರ ತೀರ್ಮಾನಿಸಿದೆ.  ದಕ್ಷಿಣ ಕನ್ನಡ ಹಾಗೂ ಉಡಪಿ ಜಿಲ್ಲೆಯ ಜನರ ದಶಕಗಳ ಬೇಡಿಕೆಯಾಗಿದ್ದ ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ವಿಶೇಷ ಸಚಿವ … Continued

ದೇಶಾದ್ಯಂತ ಬಹುಚರ್ಚಿತ ನಿಠಾರಿ ಹತ್ಯಾಕಾಂಡ ಪ್ರಕರಣದಲ್ಲಿ ಖುಲಾಸೆಯಾಗಿದ್ದ ಸುರಿಂದರ ಕೋಲಿ ಆತ್ಮಹತ್ಯೆ

ಹರಿದ್ವಾರ: 2006ರ ಬಹುಚರ್ಚಿತ ನಿಠಾರಿ ಹತ್ಯಾಕಾಂಡ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಖುಲಾಸೆಗೊಂಡಿದ್ದ ಸುರಿಂದರ ಕೋಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹರಿದ್ವಾರದಲ್ಲಿ ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಈತನ ಮೃತದೇಹ ಪತ್ತೆಯಾಗಿದೆ. ಕಳೆದ ವರ್ಷ ಸುಪ್ರೀಂ ಕೋರ್ಟ್‌ನಿಂದ ಖುಲಾಸೆಗೊಂಡ ಬಳಿಕ ಕೆಲಕಾಲದಿಂದ ಹರಿದ್ವಾರದಲ್ಲಿ ಈತ ಚಹಾ ಅಂಗಡಿ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಸಪ್ತಸರೋವರ ರಸ್ತೆಯ ಲಾಲಮಾತಾ ದೇವಾಲಯದ ಎದುರಿನಲ್ಲಿರುವ ಚಹಾ ಅಂಗಡಿಯಲ್ಲಿ … Continued