ಬೆಂಗಳೂರು: ₹8 ಲಕ್ಷ ಲಂಚ ಪಡೆಯುತ್ತಿದ್ದ ಜಿಎಸ್‌ಟಿ ಅಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಅಧೀಕ್ಷಕರೊಬ್ಬರು ₹8 ಲಕ್ಷ ಲಂಚ ಸ್ವೀಕರಿಸುತ್ತಿರುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈ ಕಾರ್ಯಾಚರಣೆಯ ದೃಶ್ಯಗಳು ಕ್ಯಾಮೆರಾದಲ್ಲೂ ಸೆರೆಯಾಗಿವೆ. ಬಂಧಿತ ಅಧಿಕಾರಿಯನ್ನು ದಕ್ಷಿಣ ಕಮಿಷನರೇಟ್‌ನ ದಕ್ಷಿಣ ವಿಭಾಗ–4ರ ಕೇಂದ್ರ ಜಿಎಸ್‌ಟಿ (GST) ಅಧೀಕ್ಷಕ ಮೋಹಿತ್ ಪ್ರತಾಪ ಸಿಂಗ್ ಎಂದು ಗುರುತಿಸಲಾಗಿದೆ. ಲೋಕಾಯುಕ್ತದ … Continued

ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಘೋಷಣೆ ಬೆನ್ನಲ್ಲೇ ಇನ್ಮುಂದೆ ಸಿನಿಮಾಗಳಲ್ಲಿ ನಟಿಸಲ್ಲ ಅಂದಿದ್ಯಾಕೆ ನಟ ಅನಂತ ನಾಗ್ ?

ಬೆಂಗಳೂರು: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಕನ್ನಡದ ಹಿರಿಯ ನಟ ಅನಂತ ನಾಗ್ (Anant Nag) ಅವರು ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ (Dadasaheb Phalke Award) ಬಂದ ಹಿನ್ನೆಲೆಯಲ್ಲಿ ಎನ್‌ಡಿಟಿವಿಯ ದೀಪಕ ಬೋಪಣ್ಣ ಅವರಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ 78 ವರ್ಷದ ಅನಂತ ನಾಗ್, … Continued

17 ವರ್ಷದ ಬಾಲಕಿ ಮೇಲೆ ಅಪ್ರಾಪ್ತರು ಸೇರಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರ, ಕೊಲೆ ; ಶವವನ್ನು ತಿಂದ ನಾಯಿಗಳು

ನವದೆಹಲಿ: ಮೂವರು ಅಪ್ರಾಪ್ತರು ಸೇರಿದಂತೆ ನಾಲ್ವರು ವ್ಯಕ್ತಿಗಳು 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಬಳಿಕ ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ, ಮೃತದೇಹವನ್ನು ನಿರ್ಜನ ಪ್ರದೇಶವೊಂದರಲ್ಲಿ ಎಸೆದಿರುವ ಘಟನೆ ದೆಹಲಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕಿಯ ಮೃತದೇಹದ ಕೆಲ ಭಾಗಗಳನ್ನು ನಾಯಿಗಳು ತಿಂದು ಹಾಕಿವೆ. ಅತ್ಯಾಚಾರ ಹಾಗೂ ಕೊಲೆ ನಡೆದ ಕೆಲ … Continued

ಕಲ್ಲು ಕ್ವಾರಿ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ.ದಂಡ

ಹಾವೇರಿ: ಪರವಾನಗಿ ನಿಯಮಗಳನ್ನು ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸಿದ್ದ ಆರೋಪದಡಿ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ರಾಜ್ಯದ ಸಕ್ಕರೆ  ಹಾಗೂ ಜವಳಿ ಕಾತೆ ಸಚಿವ ರುದ್ರಪ್ಪ ಲಮಾಣಿ ಅವರಿಗೆ ಸುಮಾರು ₹3 ಕೋಟಿ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಹುಣಸಿಕಟ್ಟಿ ಬಳಿಯಲ್ಲಿ ಕ್ವಾರಿ ನಡೆಸಲು ರುದ್ರಪ್ಪ ಲಮಾಣಿ ಅವರು … Continued

ಟಿಎಂಸಿ ಕಿತ್ತಾಟ : ಉಪಚುನಾವಣೆಗೆ ಪಕ್ಷದ ಹೆಸರು, ಚಿಹ್ನೆ ಬಳಸದಂತೆ ಎರಡೂ ಬಣಗಳಿಗೆ ಚುನಾವಣಾ ಆಯೋಗ ನಿರ್ಬಂಧ

ನವದೆಹಲಿ: ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಮೇಲಿನ ನಿಯಂತ್ರಣಕ್ಕಾಗಿ ನಡೆಯುತ್ತಿರುವ ಎರಡು ಬಣಗಳ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ (ಇಸಿಐ) ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಪಕ್ಷದ ಹೆಸರು ಹಾಗೂ ಅದರ ಚುನಾವಣಾ ಚಿಹ್ನೆಯಾದ ‘ಹೂವು ಮತ್ತು ಹುಲ್ಲು’ (Flowers & … Continued

‘ಇನ್ನೊಂದು ಅವಧಿ ಬೇಡ’ ಎಂದು ರಾಜೀನಾಮೆ ನೀಡಿದ್ದ ಚಂದ್ರಶೇಖರನ್‌ ಅಧ್ಯಕ್ಷರಾಗಿ ಮತ್ತೆ ಮರುನೇಮಕ ; ಟಾಟಾ ಸನ್ಸ್‌ನಲ್ಲಿ ನಡೆದದ್ದಾದ್ರೂ ಏನು?

ಮುಂಬೈ: ಟಾಟಾ ಸಮೂಹದ ಹೋಲ್ಡಿಂಗ್ ಕಂಪನಿಯಾದ ಟಾಟಾ ಸನ್ಸ್‌ನಲ್ಲಿ ಅಧ್ಯಕ್ಷರ ಮರುನೇಮಕ ಮತ್ತು ಕಂಪನಿಯ ಭವಿಷ್ಯದ  ಲಿಸ್ಟಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯಗಳು ತೀವ್ರಗೊಂಡಿವೆ. ಟಾಟಾ ಸನ್ಸ್ ಮಂಡಳಿಯು ಗುರುವಾರ ಎನ್. ಚಂದ್ರಶೇಖರನ್ ಅವರಿಗೆ ಕಾರ್ಯನಿರ್ವಾಹಕ ಅಧ್ಯಕ್ಷರಾಗಿ (Executive Chairman) ಐದು ವರ್ಷಗಳ ಅವಧಿಗೆ ಮರುನೇಮಕ ಮಾಡಲು ಅನುಮೋದನೆ ನೀಡಿದ ಬೆನ್ನಲ್ಲೇ, ಟಾಟಾ ಟ್ರಸ್ಟ್‌ಗಳ ಅಧ್ಯಕ್ಷ ನೋಯೆಲ್ … Continued

ಭಟ್ಕಳ ; ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ; ದೂರು – ಪ್ರತಿ ದೂರು ದಾಖಲು

ಭಟ್ಕಳ : ಗಣೇಶ ಮೂರ್ತಿ ಮೆರವಣಿಗೆ ವೇಳೆ ಕಲ್ಲು ತೂರಾಟ ; ದೂರು – ಪ್ರತಿ ದೂರು ದಾಖಲು ಕಾರವಾರ: ಜಿಲ್ಲೆಯ ಭಟ್ಕಳದ ತಲಾಂದದಲ್ಲಿ ಬುಧವಾರ ತಡರಾತ್ರಿ ಸಾರ್ವಜನಿಕ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್‌ಗಳು ದಾಖಲಾಗಿವೆ. ಪ್ರಕರಣದ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. … Continued

ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದಿದ್ದ ವ್ಯಕ್ತಿ ಸಾವು

ಶಿವಮೊಗ್ಗ: ಅಡಿಕೆ ಬೇಯಿಸುವ ವೇಳೆ ಆಕಸ್ಮಿಕವಾಗಿ ಕುದಿಯುತ್ತಿದ್ದ ಚೊಗರಿನ ಹಂಡೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ನಗರದ ವಡ್ಡಿನಕೊಪ್ಪದ ನಿವಾಸಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರನ್ನು ರುದ್ರಪ್ಪ ಅವರ ಪುತ್ರ ಜೇನುಕುಮಾರ ಎಂದು ಗುರುತಿಸಲಾಗಿದೆ. ಸೆಪ್ಟೆಂಬರ್‌ 8ರಂದು ಮನೆ ಸಮೀಪದ ಶೆಡ್‌ನಲ್ಲಿ ಅಡಿಕೆ ಬೇಯಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಬೆಂದ ಅಡಿಕೆಯನ್ನು ಹಂಡೆಯಿಂದ ಹೊರತೆಗೆದ ಬಳಿಕ … Continued

ರೇಷನ್ ಕಾರ್ಡುದಾರರಿಗೆ ಗುಡ್ ನ್ಯೂಸ್: ರೇಷನ್‌ ಕಾರ್ಡ್‌ ಇ ಕೆವೈಸಿ ಗಡುವು ವಿಸ್ತರಿಸಿದ ಸರ್ಕಾರ

ಬೆಂಗಳೂರು: ರೇಷನ್‌ ಕಾರ್ಡ್‌ ಇ ಕೆವೈಸಿಗೆ ಸಂಬಂಧಿಸಿದಂತೆ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ಇ ಕೆವೈಸಿಗೆ ನಿಗದಿಪಡಿಸಿದ್ದ ಗಡುವನ್ನು ಅಕ್ಟೋಬರ್ 20ವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಇದರಿಂದ ಇ ಕೆವೈಸಿ ಆಗದೇ ಇದ್ದ ಲಕ್ಷಾಂತರ ಜನರಿಗೆ ಅನುಕೂಲವಾಗಲಿದೆ. ಇದುವರೆಗೆ ರೇಷನ್‌ ಕಾರ್ಡ್‌ ಇ ಕೆವೈಸಿ ಮಾಡಿಸಲು ಸೆಪ್ಟೆಂಬರ್‌ … Continued

ಮತ್ತೆ 23 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದ ಸರ್ಕಾರ ; ಒಟ್ಟು ತಾಲೂಕುಗಳ ಸಂಖ್ಯೆ 124ಕ್ಕೆ ಏರಿಕೆ

ಬೆಂಗಳೂರು: ರಾಜ್ಯ ಸರ್ಕಾರ ಗುರುವಾರ ಮತ್ತೆ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಹೀಗಾಗಿ ಈವರೆಗೆ ಬರಪೀಡಿತ ಎಂದು ಘೋಷಿಸಲಾದ ಒಟ್ಟು ತಾಲೂಕುಗಳ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು (KSNDMC) ನಡೆಸಿದ ಸಮಗ್ರ ಮೌಲ್ಯಮಾಪನ ಮತ್ತು ಸ್ಥಳ ಪರಿಶೀಲನೆ (ground-truthing) ಆಧಾರದ ಮೇಲೆ ಕಂದಾಯ ಇಲಾಖೆಯು (ವಿಪತ್ತು ನಿರ್ವಹಣೆ) … Continued