ಇಸ್ರೋ ಐತಿಹಾಸಿಕ ಸಾಧನೆ ; ಭಾರತದ ಮೊದಲ ಭೂ ವೀಕ್ಷಣಾ ಉಪಗ್ರಹ ಉಡಾವಣೆ : ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ

ಬೆಂಗಳೂರು/ಶ್ರೀಹರಿಕೋಟಾ : ಶುಕ್ರವಾರ (ಸೆಪ್ಟೆಂಬರ್‌ 4) ಮುಂಜಾನೆ 2:55 ಗಂಟೆಗೆ ದೇಶದ ಬಹುತೇಕ ಜನರು ನಿದ್ರೆಯಲ್ಲಿದ್ದಾಗ, ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಭಾರತದ ಬಾಹ್ಯಾಕಾಶ ಇತಿಹಾಸದ ಮತ್ತೊಂದು ಮಹತ್ವದ ಅಧ್ಯಾಯ ಬರೆಯಲಾಗುತ್ತಿತ್ತು. ದೇಶದ ವಿವಿಧ ಮಿಷನ್ ಕಂಟ್ರೋಲ್ ಕೇಂದ್ರಗಳು, ಉಡಾವಣಾ ಸಂಕೀರ್ಣಗಳು ಮತ್ತು ಟ್ರ್ಯಾಕಿಂಗ್ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸುಮಾರು 16,500 ಇಸ್ರೋ … Continued

ನೇಪಾಳ ಪ್ರವಾಹ ದುರಂತ : ಮೃತರ ಸಂಖ್ಯೆ 1259ಕ್ಕೆ ಏರಿಕೆ, 5083 ಮಂದಿ ಇನ್ನೂ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಭೋಟೆ ಕೋಶಿ (Bhote Koshi) ನದಿಯಲ್ಲಿ ಉಂಟಾದ ಭೀಕರ ಪ್ರವಾಹ ಮತ್ತು ಭೂಕುಸಿತ ದುರಂತದ ಬಳಿಕ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿದ್ದು, ಗುರುವಾರ ಸಂಜೆ ವೇಳೆಗೆ 1,259 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. 5,083 ಮಂದಿ ನಾಪತ್ತೆಯಾಗಿರುವುದರಿಂದ ಪರಿಸ್ಥಿತಿ ಆತಂಕಕಾರಿಯಾಗಿದೆ. ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ತಗ್ಗಿಸುವಿಕೆ ಮತ್ತು ನಿರ್ವಹಣಾ ಪ್ರಾಧಿಕಾರ (NDRRMA) … Continued

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ರಿಲೀಫ್‌ : ಅಮಾನತು ಆದೇಶಕ್ಕೆ ಕೆಎಟಿ ತಡೆ

ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ಕಲಬುರಗಿ ಪೀಠ ತಡೆ ನೀಡಿದೆ. ಹುಣಸಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುರುರಾಜ ಜೋಶಿ ಹಾಗೂ ಕುಪ್ಪಿ ಶಾಲೆಯ ಅಣ್ಣಾಸಾಹೇಬ ದೇಶಮುಖ್ ಅವರು … Continued

ಕೆಪಿಎಸ್‌ಸಿ ನೇಮಕಾತಿ ಹಗರಣ: ಮೊದಲ ತಲೆದಂಡ, ಐಎಎಸ್‌ ಅಧಿಕಾರಿ ಜ್ಞಾನೇಂದ್ರಕುಮಾರ ಅಮಾನತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನೇಮಕಾತಿ ಅಕ್ರಮ ಹಗರಣದಲ್ಲಿ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರಕುಮಾರ ಅವರನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದೆ. ಈ ಕುರಿತು ಸರ್ಕಾರ ಹೊರಡಿಸಿರುವ ಆದೇಶದಲ್ಲಿ, ʼಅಖಿಲ ಭಾರತ ಸೇವೆಗಳ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು–1969ರ ನಿಯಮ 3(2) ಮತ್ತು 3(3)ʼರ ಅಡಿಯಲ್ಲಿ ಜ್ಞಾನೇಂದ್ರಕುಮಾರ ಅವರನ್ನು … Continued

ಕುಮಟಾ : ಕುಂಬೇಶ್ವರ ದೇವಸ್ಥಾನದ ಅರ್ಚಕರ ಕೊಲೆ ಪ್ರಕರಣ ; ಮೂವರಿಗೆ ಜೀವಾವಧಿ ಶಿಕ್ಷೆ

ಕಾರವಾರ : ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಕುಮಟಾದ ಅರ್ಚಕರೊಬ್ಬರನ್ನು ಪೂಜೆಯ ನೆಪವೊಡ್ಡಿ ಕರೆದೊಯ್ದು ಭೀಕರವಾಗಿ ಹತ್ಯೆಗೈದು ತೋಟದಲ್ಲೇ ಹೂತುಹಾಕಿದ್ದ ಆರು ವರ್ಷಗಳ ಹಿಂದಿನ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯವು ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಕುಮಟಾದ ಕುಂಭೇಶ್ವರ ದೇವಾಲಯದ ಅರ್ಚಕರಾಗಿದ್ದ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ … Continued

ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ ಕೈಬಿಡಲು ಆಗ್ರಹಿಸಿ ಕಾರವಾರದಲ್ಲಿ ಬೃಹತ್ ಪ್ರತಿಭಟನೆ

ಕಾರವಾರ:  ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮಘಟ್ಟ ಹಾಗೂ ನದಿಕಣಿವೆಗಳ ಪರಿಸರಕ್ಕೆ ಧಕ್ಕೆ ಉಂಟು ಮಾಡುವ ಸಾಧ್ಯತೆ ಇರುವ ಪ್ರಸ್ತಾಪಿತ ಬೇಡ್ತಿ–ವರದಾ ಹಾಗೂ ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳನ್ನು ಕೈಬಿಡುವಂತೆ ಆಗ್ರಹಿಸಿ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.  ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿವಿಧ ತಾಲೂಕುಗಳಿಂದ ಆಗಮಿಸಿದ್ದ … Continued

ತೆಲಂಗಾಣ ಕಾಂಗ್ರೆಸ್‌ನಲ್ಲಿ ಬಿರುಗಾಳಿ : ಮಗಳ ಮಾತಿಗೆ ತಾಯಿಯ ಸಚಿವ ಸ್ಥಾನಕ್ಕೆ ಕುತ್ತು: ರೇವಂತ ರೆಡ್ಡಿ ಸಂಪುಟದಿಂದ ದಿಢೀರ್ ವಜಾ !

ಹೈದರಾಬಾದ್: ತೆಲಂಗಾಣ ಕಾಂಗ್ರೆಸ್ ಸರ್ಕಾರದ ಆಂತರಿಕ ಭಿನ್ನಮತ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಅರಣ್ಯ ಸಚಿವೆ ಕೊಂಡ ಸುರೇಖಾ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಿದ್ದಾರೆ. ಈ ಕುರಿತು ಶಿಫಾರಸು ಪತ್ರವನ್ನು ರಾಜ್ಯಪಾಲ ಶಿವಪ್ರತಾಪ ಶುಕ್ಲಾ ಅವರಿಗೆ ಕಳುಹಿಸಿಕೊಡಲಾಗಿದೆ. ಕೊಂಡ ಸುರೇಖಾ ಅವರ ಮಗಳು ಮುಖ್ಯಮಂತ್ರಿ ರೇವಂತ ರೆಡ್ಡಿ … Continued

ಒಂದೇ ದಿನದಲ್ಲಿ 500ಕ್ಕೂ ಹೆಚ್ಚು ಅಧಿಕ ಅರ್ಜಿಗಳ ವಿಚಾರಣೆ ; ನ್ಯಾಯಮೂರ್ತಿ ನಾಗಪ್ರಸನ್ನ ಮತ್ತೊಂದು ಮೈಲಿಗಲ್ಲು

ಬೆಂಗಳೂರು : ತುರ್ತು ವಿಚಾರಣೆಗೆ ಕೋರಿದ್ದ 250ಕ್ಕೂ ಹೆಚ್ಚು ಅರ್ಜಿಗಳನ್ನು ಬುಧವಾರ ವಿಚಾರಣೆ ನಡೆಸುವ ಮೂಲಕ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಇದೇ ಮೊದಲ ಬಾರಿಗೆ ಹೈಕೋರ್ಟ್‌ ಕಲಾಪಗಳ ಇತಿಹಾಸದಲ್ಲೇ ಹೊಸ ದಾಖಲೆ ಬರೆದರು. ಅವರು ಒಟ್ಟು 550ಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ನಡೆಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಬುಧವಾರ (ಸೆಪ್ಟೆಂಬರ್ 2) ಬೆಳಿಗ್ಗೆ … Continued

ಖ್ಯಾತ ಕನ್ನಡ ನಟ ದುನಿಯಾ ವಿಜಯ – ನಾಗರತ್ನ ದಂಪತಿ ವಿಚ್ಛೇದನ : 2 ಕೋಟಿ ಜೀವನಾಂಶ ನೀಡಲು ಆದೇಶ

ಬೆಂಗಳೂರು: ಖ್ಯಾತ ಕನ್ನಡ ನಟ ದುನಿಯಾ ವಿಜಯ ಮತ್ತು ಅವರ ಪತ್ನಿ ನಾಗರತ್ನ ಅವರ ನಡುವಿನ ಸುದೀರ್ಘ ವೈವಾಹಿಕ ವಿವಾದ ಅಂತ್ಯಗೊಂಡಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ಇಬ್ಬರಿಗೂ ವಿಚ್ಛೇದನ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದರ ಜೊತೆಗೆ, ಪತ್ನಿ ನಾಗರತ್ನ ಅವರಿಗೆ ಒಂದು ಬಾರಿಯ ಕಾಯಂ ಜೀವನಾಂಶವಾಗಿ (ಅಲಿಮೋನಿ) 2 ಕೋಟಿ ರೂಪಾಯಿ ಪಾವತಿಸುವಂತೆ ನಟ … Continued

ಪಾಕ್ ಯುದ್ಧವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ: ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರ್ಪಡೆ ; ವರದಿ

ನವದೆಹಲಿ: 2019ರ ಭಾರತ-ಪಾಕಿಸ್ತಾನ ವೈಮಾನಿಕ ಕಾದಾಟದ ನಂತರ ಜಾಗತಿಕ ಮಟ್ಟದಲ್ಲಿ ಮನೆಮಾತಾಗಿದ್ದ ಭಾರತೀಯ ವಾಯುಪಡೆಯ ಮಾಜಿ ಗ್ರೂಪ್ ಕ್ಯಾಪ್ಟನ್ ಹಾಗೂ ವೀರ ಚಕ್ರ ಪುರಸ್ಕೃತ ಅಭಿನಂದನ್ ವರ್ಧಮಾನ್ ವಾಯುಪಡೆಯ ಸೇವೆಯಿಂದ ಅವಧಿಪೂರ್ವ ನಿವೃತ್ತಿ (Premature Retirement) ಪಡೆದಿದ್ದಾರೆ. ಪ್ರಸ್ತುತ ಅವರು  ಗೋವಾ ಮೂಲದ ಪ್ರಾದೇಶಿಕ ವಿಮಾನಯಾನ ಸಂಸ್ಥೆಯಾದ ‘ಫ್ಲೈ91’ (FLY91) ಗೆ ಕಮರ್ಷಿಯಲ್ ಪೈಲಟ್ ಆಗಿ … Continued