ಆತ್ಮಸಾಕ್ಷಿಯ ಆಧಾರದ ಮೇಲೆ ‘ವಂದೇ ಮಾತರಂ’ ಹಾಡದವರ ವಿರುದ್ಧ ದಂಡಾತ್ಮಕ ಕ್ರಮ ಬೇಡ: ಸುಪ್ರೀಂ ಕೋರ್ಟ್

ನವದೆಹಲಿ: ಆತ್ಮಸಾಕ್ಷಿಯ (Conscience) ಆಧಾರದ ಮೇಲೆ ವಂದೇ ಮಾತರಂ ಹಾಡಲು ನಿರಾಕರಿಸುವ ವ್ಯಕ್ತಿಯನ್ನು ಶಿಕ್ಷೆಗೆ ಒಳಪಡಿಸಲಾಗದು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ. 1986ರ ಬಿಜೋ ಇಮ್ಯಾನುಯೆಲ್ ವಿರುದ್ಧ ಕೇರಳ ರಾಜ್ಯ ಪ್ರಕರಣದಲ್ಲಿ ನೀಡಿದ್ದ ತೀರ್ಪಿನ ತತ್ವವನ್ನು ಗಮನದಲ್ಲಿಟ್ಟುಕೊಳ್ಳುವಂತೆ ಕೇಂದ್ರಕ್ಕೆ ತಿಳಿಸಿರುವ ನ್ಯಾಯಾಲಯ, ತಿದ್ದುಪಡಿ ಕಾನೂನಿಗೂ ಅದೇ ತತ್ವ ಅನ್ವಯವಾಗಬೇಕು ಎಂದು … Continued

ಖ್ಯಾತ ಹಿಂದೂಸ್ತಾನಿ ಸಂಗೀತ ಗಾಯಕ ಪಂ.ಇಂದೂಧರ ನಿರೋಢಿ ನಿಧನ

ಮುಂಬೈ: ಆಗ್ರಾ ಘರಾಣೆಯ ಹಿರಿಯ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಗಾಯಕ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಪಂಡಿತ ಇಂದೂಧರ ನಿರೋಡಿ (91) ಮಂಗಳವಾರ (ಸೆ.22) ನವಿ ಮುಂಬೈ ಸಮೀಪದ  ಪನ್ವೇಲ್‌ನಲ್ಲಿ ನಿಧನರಾದರು. ಜುಲೈ 11, 1935ರಂದು ಕರ್ನಾಟಕದ  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜನಿಸಿದ ಪಂ. ಇಂದೂಧರ ನಿರೋಡಿ ಅವರು ಮೈಸೂರಿನ ಸರಸ್ವತಿಪುರಂನಲ್ಲಿ … Continued

ವಂದೇ ಮಾತರಂ ಗೀತೆ ಎರಡು ಚರಣಕ್ಕೆ ಸೀಮಿತ ; ಸರ್ಕಾರದ ನಿರ್ಧಾರಕ್ಕೆ ರಾಜ್ಯಪಾಲರ ಆಕ್ಷೇಪ ; ಸಿಎಂಗೆ ಪತ್ರ

ಬೆಂಗಳೂರು : ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರಚಂದ ಗೆಹ್ಲೋತ್ ಆಕ್ಷೇಪಿಸಿದ್ದಾರೆ. ಸೆಪ್ಟೆಂಬರ್ 21ರಂದು ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ, ಸೆಪ್ಟೆಂಬರ್ 8ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶವು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ರಾಜ್ಯಪಾಲರು … Continued

ಮತ್ತೆ 53 ತಾಲೂಕುಗಳು ಬರಪೀಡಿತ ಪಟ್ಟಿಗೆ ಸೇರ್ಪಡೆ ; ಸರ್ಕಾರದ ಆದೇಶ ; ಯಾವ್ಯಾವ ತಾಲೂಕುಗಳು ? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಬರ ಪರಿಸ್ಥಿತಿಯನ್ನು ಸರ್ಕಾರ ನಿರಂತರವಾಗಿ ಮೌಲ್ಯಮಾಪನ ಮಾಡುತ್ತಿದ್ದು, ದೀಗ ಮೂರನೇ ಹಂತದಲ್ಲಿ ಮತ್ತಷ್ಟು 53 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿ ಆದೇಶ ಹೊರಡಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು,  ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ … Continued

ವಿಡಿಯೋ | ‘ಭಾರತ ನನ್ನ ಜನ್ಮಭೂಮಿ-ಧರ್ಮಭೂಮಿ, ಕರ್ನಾಟಕ ನನ್ನ ಕರ್ಮಭೂಮಿ’: ಫಾಲ್ಕೆ ಪ್ರಶಸ್ತಿ ಸ್ವೀಕರಿಸಿ ಅನಂತ ನಾಗ್ ಮಾತು

 ಐದು ದಶಕಗಳಿಗೂ ಮೀರಿದ ಕಲಾ ಪಯಣ, ರಂಗಭೂಮಿಯಿಂದ ಆರಂಭವಾಗಿ ಭಾರತೀಯ ಚಿತ್ರರಂಗದ ಹಲವು ಭಾಷೆಗಳಲ್ಲಿ ಗುರುತಿಸಿಕೊಂಡ ನಟನಾ ಬದುಕು… ಇವೆಲ್ಲವನ್ನೂ ಕೆಲವೇ ಮಾತುಗಳಲ್ಲಿ ಕಟ್ಟಿಕೊಟ್ಟ ಹಿರಿಯ ನಟ ಅನಂತ್ ನಾಗ್, ಮಂಗಳವಾರ (ಸೆ.22) ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿ ತಮ್ಮ ಜೀವನಯಾನದ ನೆನಪುಗಳನ್ನು ಹಂಚಿಕೊಂಡರು. ‘ಈ ಮಹಾನ್ ದೇಶ ನನ್ನ ಜನ್ಮಭೂಮಿ, ಕರ್ನಾಟಕ ನನ್ನ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಸಾಧ್ಯತೆ ; ಮೂರು ರಾಜ್ಯಗಳಿಗೆ ಭಾರೀ ಗಾಳಿಮಳೆಯ ಎಚ್ಚರಿಕೆ

ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ (ಡಿಪ್ರೆಶನ್) ಉಂಟಾಗಿದ್ದು, ಇದು ಮತ್ತಷ್ಟು ಬಲಿಷ್ಠಗೊಳ್ಳುವ ಲಕ್ಷಣಗಳು ಕಂಡುಬಂದಿವೆ. ಸೆಪ್ಟೆಂಬರ್ 22ರ ಬೆಳಿಗ್ಗೆ ಇದು ಗೋಪಾಲ್ಪುರದಿಂದ ಸುಮಾರು 200 ಕಿ.ಮೀ., ಕಲಿಂಗಪಟ್ಟಣದಿಂದ 200 ಕಿ.ಮೀ., ಪುರಿಯಿಂದ 210 ಕಿ.ಮೀ. ಹಾಗೂ ವಿಶಾಖಪಟ್ಟಣದಿಂದ 290 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿತ್ತು. ಇದರಿಂದಾಗಿ ಉತ್ತರ ಆಂಧ್ರ–ದಕ್ಷಿಣ ಒಡಿಶಾ ಕರಾವಳಿಯಲ್ಲಿ ಗಾಳಿ ಮತ್ತು ಮಳೆಯ ತೀವ್ರತೆ … Continued

ವಿಡಿಯೋ | ಕನ್ನಡದ ಖ್ಯಾತ ನಟ ಅನಂತ ನಾಗ್‌ಗೆ ದಾದಾಸಾಹೇಬ ಫಾಲ್ಕೆ ಪ್ರಶಸ್ತಿ ಪ್ರದಾನ ; 50 ವರ್ಷಗಳ ಸಿನಿ ಪಯಣಕ್ಕೆ ರಾಷ್ಟ್ರದ ಅತ್ಯುನ್ನತ ಗೌರವ

ಗುಜರಾತ್‌ನ ಏಕತಾ ನಗರದಲ್ಲಿ ಮಂಗಳವಾರ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟ ಅನಂತ ನಾಗ್ ಅವರಿಗೆ 2024ನೇ ಸಾಲಿನ ದಾದಾಸಾಹೇಬ ಫಾಲ್ಕೆ ಪ್ರಶಸ್ತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಭಾರತೀಯ ಚಿತ್ರರಂಗಕ್ಕೆ ಐದು ದಶಕಗಳಿಗೂ ಹೆಚ್ಚು ಕಾಲ ನೀಡಿದ ಅಪೂರ್ವ ಕೊಡುಗೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ. ಕನ್ನಡ … Continued

ಕೆಪಿಎಸ್‌ಸಿ ನೇಮಕಾತಿ ಹಗರಣದ ತನಿಖೆಗೆ ಎಸ್‌ಐಟಿ ರಚನೆ ; ಹೈಕೋರ್ಟ್​​ನಿಂದ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ಲೋಕಸೇವಾ ಆಯೋಗ (KPSC) ಮೂಲಕ ಪಶುವೈದ್ಯಾಧಿಕಾರಿಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚಿಸುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ತನಿಖೆ ಆರಂಭವಾದ ದಿನದಿಂದ 100 ದಿನಗಳೊಳಗೆ ಅಂತಿಮ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಬೇಕು. ಅಲ್ಲದೆ, ತನಿಖೆ ಪ್ರಾರಂಭವಾದ … Continued

ಕರ್ನಾಟಕದ 4 ಸ್ಥಾನಗಳು ಸೇರಿ ನಾಲ್ಕು ರಾಜ್ಯಗಳ 28 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ದಿನಾಂಕ ಘೋಷಣೆ

ನವದೆಹಲಿ : ಚುನಾವಣಾ ಆಯೋಗ (ಇಸಿಐ)ವು ಕರ್ನಾಟಕ ಸೇರಿದಂತೆ ನಾಲ್ಕು ರಾಜ್ಯಗಳ ಒಟ್ಟು 28 ವಿಧಾನ ಪರಿಷತ್ ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯ ದಿನಾಂಕವನ್ನು ಮಂಗಳವಾರ ಪ್ರಕಟಿಸಿದೆ. ಸದಸ್ಯರ ಅವಧಿ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ನಡೆಯಲಿದ್ದು, ಕರ್ನಾಟಕದಲ್ಲಿ 4 ಸ್ಥಾನಗಳು, ಉತ್ತರ ಪ್ರದೇಶದಲ್ಲಿ 11, ಬಿಹಾರದಲ್ಲಿ 8, ಮಹಾರಾಷ್ಟ್ರದಲ್ಲಿ 5 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ … Continued

3 ಮಾಧ್ಯಮಗಳಿಗೆ ಶ್ವೇತಭವನ ಪ್ರವೇಶ ನಿಷೇಧಿಸಿದ್ದಕ್ಕೆ ಅಮೆರಿಕದ ಟಿವಿ ಜಾಲಗಳ ತಿರುಗೇಟು ; ಟ್ರಂಪ್ ಕಾರ್ಯಕ್ರಮಗಳ ಪ್ರಸಾರ ಬಹಿಷ್ಕಾರ

ವಾಷಿಂಗ್ಟನ್ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೂರು ಪ್ರಮುಖ ಮಾಧ್ಯಮ ಸಂಸ್ಥೆಗಳಾದ ಸಿಎನ್‌ಎನ್‌ (CNN), ಎಂಎಸ್‌ ನೌ (MS NOW) ಮತ್ತು ಪೊಲಿಟಿಕೊ(Politico)ಗೆ ಶ್ವೇತಭವನ ಪ್ರವೇಶವನ್ನು ನಿಷೇಧಿಸಿದ್ದು, ಈ ಕ್ರಮದ ವಿರುದ್ಧ ಅಮೆರಿಕದ ಪ್ರಮುಖ ಟಿವಿ ಜಾಲಗಳು ಸೋಮವಾರ ಪ್ರತಿಭಟನೆ ನಡೆಸಿವೆ. ಟ್ರಂಪ್ ಅವರ ಕಾರ್ಯಕ್ರಮದ ನೇರ ಪ್ರಸಾರವನ್ನು ಬಹಿಷ್ಕರಿಸುವ ಮೂಲಕ ಮಾಧ್ಯಮ … Continued