ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಮಾಸ್ತಿ ಹಳ್ಳ ಪ್ರದೇಶದಲ್ಲಿ ಕೆಎಸ್ಆರ್ಟಿಸಿ ಬಸ್ ರಸ್ತೆ ಬದಿಯ ಹಳ್ಳಕ್ಕೆ ಉರುಳಿದ ಪರಿಣಾಮ 15ಕ್ಕೂ ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ, ಕೆಲವರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.
ಹುಬ್ಬಳ್ಳಿ ಕಡೆಯಿಂದ ಬಂದ ಬಸ್ ಶಿರಸಿ ಮಾರ್ಗವಾಗಿ ಉಡುಪಿ ಕಡೆಗೆ ತೆರಳುತ್ತಿದ್ದಾಗ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ. ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ ಎನ್ನಲಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಕುಮಟಾ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸ್ಥಳದಲ್ಲಿದ್ದವರು ನೆರವಾದರು. ಗಾಯಗೊಂಡ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರತೆಗೆದು ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ವೇಳೆ ಬಸ್ನಲ್ಲಿ ಎಷ್ಟು ಮಂದಿ ಪ್ರಯಾಣಿಕರಿದ್ದರು ಎಂಬ ಮಾಹಿತಿ ಲಭ್ಯವಾಗಬೇಕಿದೆ. ಈ ಸಂಬಂಧ ಕುಮಟಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


ನಿಮ್ಮ ಕಾಮೆಂಟ್ ಬರೆಯಿರಿ