ಕಲಬುರಗಿ : ಕೃಷಿ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಪೈಲಟ್ ತರಬೇತಿ ವಿಮಾನ

ಕಲಬುರಗಿ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೈಲಟ್ ತರಬೇತಿಗೆ ಬಳಸಲಾಗುತ್ತಿದ್ದ ವಿಮಾನವೊಂದು ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣದ ಸಮೀಪದ ಕೃಷಿ ಭುಮಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಸಂಜೆ ವೇಳೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಪಾಲಾ ಗ್ರಾಮ ಸಮೀಪ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.ವಿಮಾನದಲ್ಲಿ ಪೈಲಟ್ ಹಾಗೂ ತರಬೇತಿ ಪಡೆಯುತ್ತಿದ್ದ ಸಹ-ಪೈಲಟ್ ಇದ್ದರು. ಇಬ್ಬರೂ ಸುರಕ್ಷಿತರಾಗಿದ್ದು ಯಾವುದೇ ಗಾಯಗಳಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ವರದಿ ಪ್ರಕಾರ, ಈ ಎರಡು ಆಸನಗಳ ವಿಮಾನವು ವಿಮಾನ ನಿಲ್ದಾಣ ಪ್ರದೇಶದಲ್ಲಿರುವ ಖಾಸಗಿ ತರಬೇತಿ ಅಕಾಡೆಮಿಗೆ ಸೇರಿದೆ. ನಿಯಮಿತ ತರಬೇತಿ ಹಾರಾಟದಲ್ಲಿದ್ದ ವೇಳೆ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ಸಮಸ್ಯೆ ಉಂಟಾಗಿದೆ. ತಕ್ಷಣ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡ ಸಿಬ್ಬಂದಿ ವಿಮಾನವನ್ನು ಸಮೀಪದ ಕೃಷಿ ಭೂಮಿಯಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಸಿಬ್ಬಂದಿ ಹಾಗೂ ಕಲಬುರಗಿ ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ವಿಮಾನದಲ್ಲಿ ಉಂಟಾದ ತಾಂತ್ರಿಕ ದೋಷದ ನಿಖರ ಕಾರಣವನ್ನು ಪತ್ತೆಹಚ್ಚಲು ವಿಮಾನ ನಿಲ್ದಾಣದ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಮುಖ ಸುದ್ದಿ :-   ವಿಡಿಯೋ | ಬೆಂಗಳೂರು: ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡು ಪಾದಚಾರಿಗೆ ಗಾಯ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement