ಚಿಕ್ಕಮಗಳೂರು : ತಾಲೂಕಿನ ಮರ್ಲೆ ಗ್ರಾಮದಲ್ಲಿ ಕೆರೆಗೆ ಈಜಲು ತೆರಳಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ.
ಮೃತರೆಲ್ಲರೂ ಒಂದೇ ಗ್ರಾಮದವರಾಗಿದ್ದು, 6ನೇ ತರಗತಿಯಲ್ಲಿ ಓದುತ್ತಿದ್ದರು ಎನ್ನಲಾಗಿದೆ. ಮೃತರನ್ನು ತರುಣ್ (12), ಭುವನ (12) ಹಾಗೂ ಲಿಖಿತ್ (12) ಎಂದು ಗುರುತಿಸಲಾಗಿದೆ. ರಜೆ ಹಿನ್ನೆಲೆಯಲ್ಲಿ ಒಟ್ಟಾಗಿ ಕೆರೆಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ.
ಕಳೆದ ವರ್ಷ ಕೆರೆಯಲ್ಲಿ ಹೂಳು ತೆರವುಗೊಳಿಸಲಾಗಿದ್ದು, ಹೀಗಾಗಿ ಕೆರೆಯ ಕೆಲ ಭಾಗಗಳಲ್ಲಿ ನೀರಿನ ಆಳ ಹೆಚ್ಚಾಗಿತ್ತು ಎನ್ನಲಾಗಿದೆ. ಮಕ್ಕಳು ಕೆರೆಗೆ ಇಳಿದ ವೇಳೆ ಆಳದ ಅರಿವಿಲ್ಲದೆ ನೀರಿನಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗುತ್ತಿದೆ.
ಮಕ್ಕಳ ಮೃತದೇಹಗಳನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮವೇ ದುಃಖದಲ್ಲಿ ಮುಳುಗಿದೆ.
ಮಾಹಿತಿ ಪಡೆದ ಗ್ರಾಮಾಂತರ ಠಾಣೆ (Rural Police Station) ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ