ಧಾರವಾಡ: ಜಿಲ್ಲೆಯ ನವಲಗುಂದ ತಾಲ್ಲೂಕಿನ ಅಮರಗೋಳ ಗ್ರಾಮದ ಸಮೀಪ ಶುಕ್ರವಾರ ಕಾರು ಮತ್ತು ಕ್ಯಾಂಟರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಅಜಿತ, ಸಂದೀತ ಮತ್ತು ರಾಕೇಶ ಹಾಗೂ ಶ್ರುತಿ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗ್ಗೆ ಸುಮಾರು 6 ಗಂಟೆಗೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು,ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು, ಕ್ಯಾಂಟರ್ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ