ಕಾರು – ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

ಧಾರವಾಡ: ಜಿಲ್ಲೆಯ ನವಲಗುಂದ ತಾಲ್ಲೂಕಿನ ಅಮರಗೋಳ ಗ್ರಾಮದ ಸಮೀಪ ಶುಕ್ರವಾರ ಕಾರು ಮತ್ತು ಕ್ಯಾಂಟರ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ಮೃತರನ್ನು ಅಜಿತ, ಸಂದೀತ ಮತ್ತು ರಾಕೇಶ ಹಾಗೂ ಶ್ರುತಿ ಎಂದು ಗುರುತಿಸಲಾಗಿದೆ. ಶುಕ್ರವಾರ ಬೆಳಗ್ಗೆ ಸುಮಾರು 6 ಗಂಟೆಗೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದ್ದು,ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು, ಕ್ಯಾಂಟರ್‌ಗೆ ಮುಖಾಮುಖಿಯಾಗಿ ಡಿಕ್ಕಿಯಾಗಿದೆ. ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಕುಮಟಾ: ಅ.10ರಂದು ʼಭಾವಧಾರʼ ಗೀತೆಗಳ ಗುಚ್ಛ ಗಾಯನ

ನಿಮ್ಮ ಕಾಮೆಂಟ್ ಬರೆಯಿರಿ

advertisement