ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ : ಕಾರವಾರದ ನಾವಿಕನಿಗೆ ಗಾಯ ; ವರದಿ

ನವದೆಹಲಿ: ಒಮಾನ್ ಕರಾವಳಿಯ ಸಮೀಪ ಹಾರ್ಮುಜ್ ಜಲಸಂಧಿಯ ಮೂಲಕ ಸಾಗುತ್ತಿದ್ದ ಪನಾಮ ಧ್ವಜ ಹೊಂದಿದ್ದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ಮಾದರಿಯ ವಸ್ತುವೊಂದು ಅಪ್ಪಳಿಸಿದ ಪರಿಣಾಮ 11 ಭಾರತೀಯರು ಸೇರಿದಂತೆ 12 ಮಂದಿ ನಾವಿಕರು ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ 11 ಮಂದಿ ಭಾರತೀಯ ನಾವಿಕರಲ್ಲಿ ಕಾರವಾರದ ನಾವಿಕರೊಬ್ಬರು ಸೇರಿದ್ದಾರೆ ಎಂದು ವರದಿಯಾಗಿದೆ.
ವಾಣಿಜ್ಯ ಹಡಗುಗಳ ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಇಂತಹ ದಾಳಿಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಭಾರತ ಆಗ್ರಹಿಸಿದೆ.’ಎಂಟಿ ಆನ್ ಪೀಸ್’ (MT On Peace) ಹೆಸರಿನ ಪನಾಮ ಧ್ವಜ ಹೊಂದಿರುವ ವಾಣಿಜ್ಯ ಹಡಗಿನಲ್ಲಿ ಒಟ್ಟು 19 ಮಂದಿ ಸಿಬ್ಬಂದಿ ಇದ್ದರು. ಅವರಲ್ಲಿ 17 ಮಂದಿ ಭಾರತೀಯ ಪ್ರಜೆಗಳಾಗಿದ್ದಾರೆ ಎನ್ನಲಾಗಿದೆ

. ಹಾರ್ಮುಜ್ ಜಲಸಂಧಿಯ ಮೂಲಕ ಸಂಚರಿಸುತ್ತಿದ್ದಾಗ ಹಡಗಿನ ಮೇಲೆ ಕ್ಷಿಪಣಿ ಮಾದರಿಯ ವಸ್ತು ಅಪ್ಪಳಿಸಿದ್ದು, ಘಟನೆಯಲ್ಲಿ 12 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 11 ಮಂದಿ ಭಾರತೀಯರು ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ.
ಮಂಗಳವಾರ ಪನಾಮಾ ಧ್ವಜ ಹೊಂದಿದ್ದ ವ್ಯಾಪಾರಿ ಹಡಗಿನ ಮೇಲೆ ದಾಳಿ ನಡೆದಿದ್ದು, ಗಾಯಗೊಂಡವರಲ್ಲಿ ಕಡವಾಡದ ನಾವಿಕರೊಬ್ಬರು ಸೇರಿದ್ದಾರೆ ಎಂದು ತಿಳಿದುಬಂದಿದೆ. ಅವರನ್ನು ಒಮಾನ್ ಅಧಿಕಾರಿಗಳ ನೆರವಿನಿಂದ ಹಡಗಿನಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ಒಮಾನ್‌ನ ಖಸಬ್‌ನಲ್ಲಿ (Khasab) ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಲಾಗಿದೆ. ಆದರೆ ಈ ಬಗ್ಗೆ ರಾಜ್ಯ ಸರ್ಕಾರವಾಗಲಿ, ಜಿಲ್ಲಾಡಳಿತವಾಗಲಿ ಅಧಿಕೃತ ಮಾಹಿತಿ ನೀಡಿಲ್ಲ.

ಪ್ರಮುಖ ಸುದ್ದಿ :-   ಹಾಗಾದ್ರೆ ಕೇರಳದ ಕಾಂಗ್ರೆಸ್‌ ಸಿಎಂ, ತಮಿಳುನಾಡು ಟಿವಿಕೆ ಸಿಎಂ ಕೂಡ ಮತಗಳ್ಳರೇ: ಸಿಜೆಪಿ ಹೇಳಿಕೆಗೆ ಚೇತನ್ ಅಹಿಂಸಾ ಆಕ್ಷೇಪ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement