ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್‌, ಏಕದಿನ ಸರಣಿಗೆ ಭಾರತದ ಕ್ರಿಕೆಟ್‌ ತಂಡ ಪ್ರಕಟ

ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ನವೆಂಬರ್ 4ರಿಂದ ಆಕ್ಲೆಂಡ್‌ನಲ್ಲಿ ಆರಂಭವಾಗಲಿರುವ ಐದು ಪಂದ್ಯಗಳ ಏಕದಿನ ಸರಣಿ ಹಾಗೂ ಎರಡು ಟೆಸ್ಟ್‌ ಪಂದ್ಯಕ್ಕೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಸರಣಿಯ ಮೊದಲ ಮೂರು ಪಂದ್ಯಗಳಿಗೆ ಶುಭಮನ್ ಗಿಲ್ ನಾಯಕತ್ವ ವಹಿಸಲಿದ್ದು, ಕೊನೆಯ ಎರಡು ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ತಂಡದ ನಾಯಕನಾಗಿ ಜವಾಬ್ದಾರಿ ನಿರ್ವಹಿಸಲಿದ್ದಾರೆ. ಇಶಾನ್ ಕಿಶನ್ ಉಪನಾಯಕನಾಗಿರಲಿದ್ದಾರೆ. ಸರಣಿಯ ಕೊನೆಯ ಎರಡು ಏಕದಿನ ಪಂದ್ಯಗಳಿಂದ ಪ್ರಮುಖ ಟೆಸ್ಟ್ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.
ಇದೇ ವೇಳೆ, ಟೆಸ್ಟ್ ತಂಡಕ್ಕೆ ಆಕಾಶ ದೀಪ್ ಮರಳಿರುವುದು ಪ್ರಮುಖ ಬೆಳವಣಿಗೆಯಾಗಿದೆ. ಅವರು ಇರಾನಿ ಕಪ್ ಹಾಗೂ ಬಂಗಾಳ ತಂಡದ ರಣಜಿ ಟ್ರೋಫಿಯ ಆರಂಭಿಕ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅವರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ರಿಷಭ್ ಪಂತ್ ಅವರನ್ನೂ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದ್ದು, ಅವರು ವೈದ್ಯಕೀಯ ಅನುಮತಿ ಪಡೆದ ಬಳಿಕವಷ್ಟೇ ತಂಡದಲ್ಲಿ ಆಡುವುದು ಖಚಿತವಾಗಲಿದೆ.

ಮತ್ತೊಂದೆಡೆ, ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ಮತ್ತೊಮ್ಮೆ ಏಕದಿನ ತಂಡದಿಂದ ಕೈಬಿಡಲಾಗಿದೆ. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯಲ್ಲಿ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ವಿಫಲರಾದ ಹಿನ್ನೆಲೆಯಲ್ಲಿ, ಅವರ ಬದಲಿಗೆ ಅಕ್ಷರ ಪಟೇಲ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ಅವರು ಟೆಸ್ಟ್‌ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಈ ಟೆಸ್ಟ್ ಸರಣಿಯು ನವೆಂಬರ್ 19 ರಂದು ವೆಲ್ಲಿಂಗ್ಟನ್‌ನಲ್ಲಿ ಪ್ರಾರಂಭವಾಗಲಿದ್ದು, ಎರಡನೇ ಹಾಗೂ ಅಂತಿಮ ಪಂದ್ಯವು ನವೆಂಬರ್ 27 ರಿಂದ ಡಿಸೆಂಬರ್ 1 ರವರೆಗೆ ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿದೆ. ಪ್ರವಾಸದ ವೇಳೆ ಐದು ಟಿ20 (T20I) ಮತ್ತು ಐದು ಏಕದಿನ (ODI) ಪಂದ್ಯಗಳನ್ನು ಆಡಿದ ನಂತರ, ಈ ಎರಡು ತಂಡಗಳು ಕ್ರಿಕೆಟ್‌ನ ಸುದೀರ್ಘ ಸ್ವರೂಪದಲ್ಲಿ (ಟೆಸ್ಟ್ ಸರಣಿಯಲ್ಲಿ) ಮುಖಾಮುಖಿಯಾಗಲಿವೆ.

ಪ್ರಮುಖ ಸುದ್ದಿ :-   ಕಾಂಗ್ರೆಸ್ ತೊರೆದವರನ್ನು 'ಹೇಡಿಗಳು' ಎಂದು ಕರೆದ ರಾಹುಲ್ ಗಾಂಧಿ ; ಅವರೆಲ್ಲ ನಿಮ್ಮ ಸ್ನೇಹಿತರಾಗಿದ್ರು ಎಂದು ಕಾಲೆಳೆದ ಖರ್ಗೆ !

ಮೊದಲ ಮೂರು ಏಕದಿನ ಪಂದ್ಯಗಳಿಗೆ ಭಾರತ ತಂಡ :
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ನಿತೀಶಕುಮಾರ ರೆಡ್ಡಿ, ಅಕ್ಷರ ಪಟೇಲ್, ನಮನ್ ಧೀರ್, ಅಂಶುಲ್ ಕಾಂಬೋಜ್, ಗುರ್ನೂರ್ ಬ್ರಾರ್, ಋತುರಾಜ ಗಾಯಕ್ವಾಡ್, ಅರ್ಷದೀಪ ಸಿಂಗ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಮೊಹಮ್ಮದ್ ಸಿರಾಜ್, ಪ್ರಸಿದ್ಧ ಕೃಷ್ಣ, ಕುಲದೀಪ್ ಯಾದವ್.
ನಾಲ್ಕು ಮತ್ತು ಐದನೇ ಏಕದಿನ ಪಂದ್ಯಗಳಿಗೆ ಭಾರತ ತಂಡ
ಶ್ರೇಯಸ್ ಅಯ್ಯರ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್ ಹಾಗೂ ಉಪನಾಯಕ), ನಿತೀಶಕುಮಾರ ರೆಡ್ಡಿ, ಅಕ್ಷರ ಪಟೇಲ್, ನಮನ್ ಧೀರ್, ಔಕಿಬ್ ನಬಿ, ಗುರ್ನೂರ್ ಬ್ರಾರ್, ಋತುರಾಜ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಕುಮಾರ ಕುಶಾಗ್ರ (ವಿಕೆಟ್ ಕೀಪರ್), ಮೊಹಮ್ಮದ್ ಸಿರಾಜ್, ಯಶ ಠಾಕೂರ್, ಕುಲದೀಪ ಯಾದವ್.
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ
ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್ (ಉಪನಾಯಕ), ದೇವದತ್ತ ಪಡಿಕ್ಕಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ ಜುರೇಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಂಶುಲ್ ಕಾಂಬೋಜ್, ಜಸ್‌ಪ್ರೀತ್ ಬುಮ್ರಾ, ಪ್ರಸಿದ್ಧ ಕೃಷ್ಣ, ಆಕಾಶ ದೀಪ್, ಸಾಯಿ ಸುದರ್ಶನ, ನಿತೀಶಕುಮಾರ ರೆಡ್ಡಿ, ವಾಷಿಂಗ್ಟನ್ ಸುಂದರ, ಕುಲದೀಪ ಯಾದವ್ ಹಾಗೂ ಮೊಹಮ್ಮದ್ ಸಿರಾಜ್.

ಪ್ರಮುಖ ಸುದ್ದಿ :-   ಹಲ್ಲಿಲ್ಲದ ಹಾವಿನಿಂದ ಬಯಲಾದ ಗಂಡನ ಕೊಲೆ ಕೃತ್ಯ ; ಪತ್ನಿ-ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement