ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ಶುಕ್ರವಾರ ದೆಹಲಿಯ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಶುಕ್ರವಾರ ಸಂಜೆ 7:30ರ ಸುಮಾರಿಗೆ ಎದೆ ಸೋಂಕಿನ ಸಮಸ್ಯೆಯಿಂದ ಅವರನ್ನು ಆಸ್ಪತ್ರೆಗೆ ಕರೆತರಲಾಗಿದ್ದು, ಶ್ವಾಸಕೋಶ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರನ್ನು ಶ್ವಾಸಕೋಶ ವಿಭಾಗಕ್ಕೆ ದಾಖಲಿಸಲಾಗಿದ್ದು, ವೈದ್ಯರ ತಂಡವೊಂದು ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.
98 ವರ್ಷ ವಯಸ್ಸಿನ ಅಡ್ವಾಣಿ ಅವರು, ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣದಿಂದಾಗಿ ಈ ವರ್ಷದ ಮೇ ತಿಂಗಳಲ್ಲಿ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಅವರು ಬಿಡುಗಡೆಗೊಂಡಿದ್ದರು.
ಬಿಜೆಪಿಯ ರೂವಾರಿಗಳಲ್ಲಿ ಅದ್ವಾನಿ ಕೂಡ ಒಬ್ಬರು. ಅವರು 1986 ರಿಂದ 1990 ರವರೆಗೆ, 1993 ರಿಂದ 1998 ರವರೆಗೆ ಮತ್ತು 2004 ರಿಂದ 2005 ರವರೆಗೆ – ಹೀಗೆ ಒಟ್ಟು ಮೂರು ಅವಧಿಗಳಿಗೆ ಪಕ್ಷದ ಅಧ್ಯಕ್ಷರಾಗಿದ್ದರು.

ಪ್ರಮುಖ ಸುದ್ದಿ :-   ಕಾಂಗ್ರೆಸ್ ತೊರೆದವರನ್ನು 'ಹೇಡಿಗಳು' ಎಂದು ಕರೆದ ರಾಹುಲ್ ಗಾಂಧಿ ; ಅವರೆಲ್ಲ ನಿಮ್ಮ ಸ್ನೇಹಿತರಾಗಿದ್ರು ಎಂದು ಕಾಲೆಳೆದ ಖರ್ಗೆ !

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement