ಕರ್ನಾಟಕದ ಹಲವು ಜಿಲೆಗಳಲ್ಲಿ ಅ.22ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದ ವಾತಾವರಣದಲ್ಲಿನ ಬದಲಾವಣೆಗಳ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧೆಡೆ ಮುಂದಿನ ಮೂರ್ನಾಲ್ಕು ದಿನ ಅಂದರೆ ಅಕ್ಟೋಬರ್ 22ರ ವರೆಗೂ ಗುಡುಗು, ಮಿಂಚು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆಯ  ಮುನ್ಸೂಚನೆಯ ಪ್ರಕಾರ, ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 22ರ ವರೆಗೆ ಮಳೆಯಾಗುವ ಮುನ್ಸೂಚನೆ ಇದೆ.
ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಅಕ್ಟೋಬರ್ 19ರಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.  ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಹಾಗೂ ಬಳ್ಳಾರಿ ಜಿಲ್ಲೆಗಳ ಹಲವೆಡೆ ಮೂರ್ನಾಲ್ಕು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 18ರಿಂದ 24ರವರೆಗೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಮಲೆನಾಡು ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನದ ಸಕಲೇಶಪುರ ಭಾಗಗಳಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದ್ದು, ಇಲ್ಲಿ ಅಕ್ಟೋಬರ್ 24ರ ವರೆಗೆ ಇದೇ ವಾತಾವಾರಣ ಮುಂದುವರೆಯಲಿದೆ. ಹಾಗೂ ದಕಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು ಸೇರಿ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement