ಮಂಗಳೂರು : ಬಾಲಕರಿಗೆ ಲೈಂಗಿಕ ಕಿರುಕುಳದ ಆರೋಪ: ಚರ್ಚ್‌ ಪಾದ್ರಿ ಬಂಧನ

ಮಂಗಳೂರು: ಮಂಗಳೂರಿನ ಚರ್ಚ್‌ನಲ್ಲಿ ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಾದ್ರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಾರ್ಥನೆಗೆ ಹೋದ ಸಂದರ್ಭದಲ್ಲಿ ಬಾಲಕರಿಗೆ ವೆಲೆನ್ಸಿಯಾ ಚರ್ಚ್‌ನ ಪಾದ್ರಿ ಸಿಪ್ರಿಯನ್ ಪಿಂಟೋ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಅಲ್ಲದೆ, ಮಕ್ಕಳ ಪೋಷಕರು ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಈ ದೂರಿನ ಮೇರೆಗೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಸಿಪ್ರಿಯನ್ ಪಿಂಟೋನನ್ನು ಬಂಧಿಸಲಾಗಿದೆ ಎಂದು ಹೇಳಲಾಗಿದೆ. ತನ್ನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಸಿಪ್ರಿಯನ್ ಪಿಂಟೋ ಮಂಗಳೂರಿನಿಂದ ಪರಾರಿಯಾಗಿದ್ದರು. ಆದರೆ ಹುಡುಕಾಟ ನಡೆಸಿದ ಪೊಲೀಸರು ಹಾಸನದ ಸಕಲೇಶಪುರದ ಸಂಬಂಧಿ ಮನೆಯಲ್ಲಿ ಇರುವುದನ್ನು ಪತ್ತೆಹಚ್ಚಿದ್ದು, ನಂತರ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ ಎನ್ನಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆದಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement