ದಸರಾ ಕಾರ್ಯಕ್ರಮದ ವೇದಿಕೆಯಲ್ಲಿ ನಟಿ ರಚಿತಾ ರಾಮ್ ಹೆಗಲ ಮೇಲೆ ಕೈ ಹಾಕಿ ಅಭಿಮಾನಿಯ ಹುಚ್ಚಾಟ

ತುಮಕೂರು: ತುಮಕೂರು ದಸರಾ ಮಹೋತ್ಸವದ ವೇದಿಕೆಯಲ್ಲಿ ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ  ರಚಿತಾ ರಾಮ್ ಅವರ ಜೊತೆ ಅಭಿಮಾನಿಯೊಬ್ಬ ಅನುಚಿತವಾಗಿ ವರ್ತಿಸಿರುವ ಘಟನೆ ವರದಿಯಾಗಿದೆ. ನಟಿಯ ಪೂರ್ವಾನುಮತಿಯಿಲ್ಲದೆ ಅವರ ಹೆಗಲ ಮೇಲೆ ಕೈಹಾಕಿ, ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳಲು ಆತ ಯತ್ನಿಸಿದ್ದಾನೆ.
ಸೋಮವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನಟಿ ರಚಿತಾ ರಾಮ್‌ ವೇದಿಕೆಗೆ ಆಗಮಿಸಿದ್ದರು. ಈ ವೇಳೆ ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಯೊಬ್ಬ ಭದ್ರತಾ ಸಿಬ್ಬಂದಿಯ ಕಣ್ಣುತಪ್ಪಿಸಿ ನೇರವಾಗಿ ವೇದಿಕೆ ಏರಿದ್ದಾನೆ. ನಂತರ ನಟಿಯ ಅನುಮತಿಯಿಲ್ಲದೆ ಅವರ ಹೆಗಲ ಮೇಲೆ ಕೈಹಾಕಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದಾನೆ. ಈ ಅನಿರೀಕ್ಷಿತ ವರ್ತನೆಯಿಂದ ಗಾಬರಿಗೊಂಡ ನಟಿ ರಚಿತಾ ರಾಮ್, ಈ ವರ್ತನೆಗೆ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಕ್ಷಣವೇ ಎಚ್ಚೆತ್ತ ಸ್ಥಳದಲ್ಲಿದ್ದ ಪೊಲೀಸರು ಹಾಗೂ ಇತರರು ಕೂಡಲೇ ಮಧ್ಯಪ್ರವೇಶಿಸಿ ಅನುಚಿತವಾಗಿ ವರ್ತಿಸಿದ ಅಭಿಮಾನಿಯನ್ನು ವೇದಿಕೆಯಿಂದ ಕರೆದೊಯ್ದಿದ್ದಾರೆ.
ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement